ಆರ್.ಆರ್ ನಗರ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ ಸಲ್ಲಿಕೆ…

Promotion

ಬೆಂಗಳೂರು,ಅಕ್ಟೋಬರ್,14,2020(www.justkannada.in):  ಆರ್.ಆರ್ ನಗರ ಉಪಚುನಾವಣಾ ಕಣ ರಂಗೇರಿದ್ದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ಈ ನಡುವೆ ಇಂದು ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ನಾಮಪತ್ರ ಸಲ್ಲಿಸಿದರು.

ಆರ್.ಆರ್ ನಗರ ಬಿಬಿಎಂಪಿ ಕಚೇರಿಗೆ ತೆರಳಿದ ಮುನಿರತ್ನ ಆರ್.ಆರ್ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಮುನಿರತ್ನಗೆ ಡಿಸಿಎಂ ಅಶ್ವಥ್ ನಾರಾಯಣ್ ಸಚಿವರಾದ ಆರ್.ಅಶೋಕ್, ಸುಧಾಕರ್, ಭೈರತಿ ಬಸವರಾಜ್ ಸಾಥ್ ನೀಡಿದರು.rr-nagar-by-election-bjp-candidate-muniratna-nomination-file

ನಾಮಪತ್ರ ಸಲ್ಲಿಕೆಗೂ ಮುನ್ನ ಮುನಿರತ್ನ ಅವರು ಚೌಡೇಶ್ವರಿ ದೇಗುಲ ಮತ್ತು ನಾಗರಬಾವಿಯ ಆಂಜನೇಯ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆಸಲ್ಲಿಸಿದರು. ನಂತರ ಬಿಬಿಎಂಪಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

Key words: RR nagar- by-election- BJP candidate –Muniratna- nomination-file