ಮತಗಟ್ಟೆ ಬಳಿ ಹಣ ಹಂಚಿಕೆ ಆರೋಪ: ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ…

Promotion

ಬೆಂಗಳೂರು, ನವೆಂಬರ್,3,2020(www.justkannada.in):  ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣಾ ಆಖಾಡ ರಂಗೇರಿದ್ದು ಇಂದು ಮತದಾನ ನಡೆಯುತ್ತಿದೆ. ಈ ನಡುವೆ ಹಣ ಹಂಚಿಕೆ ಆರೋಪದ ಮೇಲೆ ಆರ್.ಆರ್ ನಗರ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.jk-logo-justkannada-logo

ಆರ್.ಆರ್ ನಗರ ಕ್ಷೇತ್ರದ ಸುಮನಹಳ್ಳಿಯ ಮಾತಾಪುರದಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತರು ಮತಗಟ್ಟೆ ಬಳಿ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿ ವಾಗ್ವಾದಕ್ಕಿಳಿದರು. ಹಣ ಹಂಚಿಕೆ ಮಾಡುತ್ತಿರುವ ಬಗ್ಗೆ ಬಿಜೆಪಿ ಕಾರ್ಯಕರ್ತರಿಗೆ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪ್ರಶ್ನಿಸಿದ್ದಾರೆ. ಈ ವೇಳೆ ಎರಡು ಪಕ್ಷಗಳ ನಡುವೆ ವಾಗ್ವಾದ ನಡೆದಿದ್ದು ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.rr-nagar-byelection-allegation-money-distribute-between-jds-bjp-activists

ಈ ಬಗ್ಗೆ ಮಾತನಾಡಿರುವ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ, ಬಿಜೆಪಿ ಕಾರ್ಯಕರ್ತರು ಮತಗಟ್ಟೆಬಳಿ ಹಣ ಹಂಚಿಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಇತ್ತು. ಹೀಗಾಗಿ ಆ ವಿಚಾರವನ್ನ ಪೊಲೀಸರ ಗಮನಕ್ಕೆ ತಂದು ಅಲ್ಲಿ ಟೇಬಲ್ ತೆರವುಗೊಳಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

Key words: RR Nagar- byelection-Allegation – money –distribute-between- JDS -BJP activists.