ಹಾಲಿವುಡ್ ಕ್ರಿಟಿಕ್ಸ್ ಅಸೋಸಿಯೇಷನ್ ಪ್ರಶಸ್ತಿಗೆ ಆರ್ ಆರ್ ಆರ್ ನಾಮನಿರ್ದೇಶನ

Promotion

ಬೆಂಗಳೂರು, ಜುಲೈ 01, 2022 (www.justkannada.in): ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾ ಹಾಲಿವುಡ್ ಕ್ರಿಟಿಕ್ಸ್ ಅಸೋಸಿಯೇಷನ್ ಪ್ರಶಸ್ತಿಗಳಿಗೆ ನಾಮನಿರ್ದೇಶನಗೊಂಡಿದೆ.

ಜೂನಿಯರ್ ಎನ್ ಟಿಆರ್, ರಾಮ್ ಚರಣ್, ರಾಜಮೌಳಿ ಕಾಂಬಿನೇಷನ್ ನಲ್ಲಿ ತೆರೆಕಂಡಿದ್ದ ‘ಆರ್‌ಆರ್‌ಆರ್’ ಮಾರ್ಚ್ 25 ರಂದು ಬಿಡುಗಡೆಯಾಗಿತ್ತು. ಜತೆಗೆ ರೂ. 1,150 ಕೋಟಿ ಗಳಿಸಿ ನಾಲ್ಕನೇ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಿತ್ರ ಎಂಬ ಖ್ಯಾತಿಗೆ ಪಾತ್ರವಾಗಿತ್ತು.

ಹಾಲಿವುಡ್ ಕ್ರಿಟಿಕ್ಸ್ ಅಸೋಸಿಯೇಷನ್ ಪ್ರಶಸ್ತಿಗಳಿಗೆ ನಾಮನಿರ್ದೇಶನಗೊಂಡಿರುವ ವಿಷಯವನ್ನು ‘ಆರ್‌ಆರ್‌ಆರ್’ ತಂಡ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದೆ.

ಅತ್ಯುತ್ತಮ ಚಿತ್ರ ವಿಭಾಗದಲ್ಲಿ ನಾಮನಿರ್ದೇಶನಗೊಂಡಿರುವುದು ಸಂತಸ ತಂದಿದೆ ಎಂದು ಸಿನಿಮಾ ತಂಡ ತಿಳಿಸಿದೆ. ಇಲ್ಲಿಯವರೆಗೆ ಯಾವುದೇ ಭಾರತೀಯ ಚಿತ್ರ ಈ ಪ್ರಶಸ್ತಿಗಳಿಗೆ ಸ್ಪರ್ಧಿಸಿಲ್ಲ,