Promotion
ಕಲ್ಬುರ್ಗಿ,ಸೆಪ್ಟಂಬರ್,16,2023(www.justkannada.in): ಆರ್ ಎಸ್ ಎಸ್ ತತ್ವವು ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಆರ್ಎಸ್ಎಸ್ ತತ್ವ ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ. ಆರ್ ಎಸ್ ಎಸ್ ತತ್ವದಲ್ಲಿ ಆರ್ಥಿಕ ಸಮಾನತೆ ಇಲ್ಲ, ದೇಶಭಕ್ತಿಯೂ ಇಲ್ಲ ಎಂದು ಕಿಡಿಕಾರಿದರು.
ನಾನೇನು ಆರ್ಎಸ್ಎಸ್ ಬಗ್ಗೆ ಮಾತನಾಡಲು ಭಯ ಪಡಲ್ಲ. ಸರ್ಕಾರದ ಶೈಕ್ಷಣಿಕ ಕೇಂದ್ರಗಳಲ್ಲಿ ಕೇಸರಿಕರಣ ನಡೆಯಬಾರದು. ಆರ್ಎಸ್ಎಸ್ನವರಿಗೆ ಆಸಕ್ತಿ ಇದ್ದರೆ ಖಾಸಗಿಯಾಗಿ ನಡೆಸಲಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
Key words: RSS – anti-democratic-anti-national – Minister- Priyank Kharge