ನಿಯಮಾವಳಿ, ಕೋರ್ಟ್ ಆದೇಶದ ಪ್ರಕಾರ ಮರಣೋತ್ತರ ಪ್ರಶಸ್ತಿ ನೀಡಲು ಅವಕಾಶ ಇಲ್ಲ- ಸಚಿವ ಸುನೀಲ್ ಕುಮಾರ್.

Promotion

ಉಡುಪಿ,ನವೆಂಬರ್,1,2021(www.justkannada.in):  ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ  ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ಅಭಿಮಾನಿಗಳು ಒತ್ತಡ ಹಾಕಿದ್ದು ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಉಡುಪಿಯಲ್ಲಿ ಮಾತನಾಡಿದ ಸಚಿವ ಸುನೀಲ್ ಕುಮಾರ್, ನಿಯಮಾವಳಿ, ಕೋರ್ಟ್ ಆದೇಶದ ಪ್ರಕಾರ ಮರಣೋತ್ತರ ಪ್ರಶಸ್ತಿ ನೀಡಲು ಅವಕಾಶ ಇಲ್ಲ. ಹೀಗಾಗಿ ಈ ಬೇಡಿಕೆ ಪರಿಗಣಿಸಲು ಆಗಲ್ಲ. ಮುಂದಿನ ದಿನಗಳಲ್ಲಿ ಪುನೀತ್ ರಾಜ್ ಕುಮಾರ್ ಅವರ ಸೇವೆ ಪರಿಗಣಿಸುತ್ತೇವೆ. ಪುನೀತ್ ಅವರಿಗೆ ಯಾವ ರೀತಿ ಗೌರವ ಕೊಡಬೇಕೆಂದು ಸರ್ಕಾರ ನಿರ್ಧರಿಸುತ್ತದೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸುತ್ತಿರುವವರ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸುನೀಲ್ ಕುಮಾರ್, ಅಲ್ಪಬುದ್ಧಿ ಇರುವವರು ಈ ರೀತಿ ಮಾತನಾಢುತ್ತಾರೆ. ಎನ್ ಇಪಿ ಜಾರಿಯಿಂದ  ಸಾಮಾನ್ಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ಸಿಗಲಿದೆ. ನಮ್ಮ ಭಾಷೆಗೂ ಆದ್ಯತೆ ನೀಡಲಾಗಿದೆ ಎಂದರು.

Key words: rule- court- order -does not -allow -posthumous –awards- Minister -Sunil Kumar.