ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಸ್​. ನಾರಾಯಣ್ ಪುತ್ರ ಪಂಕಜ್​

Promotion

ಬೆಂಗಳೂರು, ನವೆಂಬರ್ 24, 2021 (www.justkannada.in): ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಎಸ್​. ನಾರಾಯಣ್ ಅವರ ಪುತ್ರ ಪಂಕಜ್​ ನಾರಾಯಣ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ರಕ್ಷಾ ಜೊತೆ ಪಂಕಜ್​ ನಾರಾಯಣ್ ವಿವಾಹ ನೆರವೇರಿದ್ದು, ಮದುವೆ ಸಮಾರಂಭದಲ್ಲಿ ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಕೆಲವು ಗಣ್ಯರು ಪಾಳ್ಗೊಂಡು ಆಶೀರ್ವಾದ ಮಾಡಿದ್ದಾರೆ.

ಕೆಲವೇ ದಿನಗಳ ಹಿಂದೆ ರಕ್ಷಾ ಜೊತೆ ಪಂಕಜ್​ ಅವರ ನಿಶ್ಚಿತಾರ್ಥ ನೆರವೇರಿತ್ತು. ಈಗ ಮೈಸೂರಿನಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ.

ಕೇವಲ ಆಪ್ತರ ಸಮ್ಮುಖದಲ್ಲಿ ಮದುವೆ ನಡೆದಿದ್ದು, ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಕೆಲವು ಗಣ್ಯರು ನವ ದಂಪತಿಗೆ ಆಶೀರ್ವಾದ ಮಾಡಿದ್ದಾರೆ.