ಎರಡನೇ ಮಗುವಿಗೆ ಜನ್ಮ ನೀಡಿದ ಸಮೀರಾ ರೆಡ್ಡಿ: ಫೋಟೋ ಶೇರ್ ಮಾಡಿ ಸಂತಸ ಹಂಚಿಕೊಂಡ ನಟಿ

Promotion

ಮುಂಬೈ:ಜುಲೈ-12:(www.justkannada.in) ಬಹುಭಾಷಾ ನಟಿ ಸಮೀರಾ ರೆಡ್ಡಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಮೂಲಕ ಅಕ್ಷೈ ವಾರ್ದೆ-ಸಮೀರಾ ದಂಪತಿ ಎರಡನೇ ಮಗುವಿನ ಆಗಮನದ ಸಂಭ್ರಮದಲ್ಲಿದ್ದಾರೆ.

ಇಂದು ಬೆಳಗ್ಗೆ ಮುಂಬೈನ ಬೀಮ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಮೀರಾ ರೆಡ್ಡಿ, ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಸ್ವತಃ ಸಮೀರಾ ತನ್ನ ಇನ್‍ಸ್ಟಾಗ್ರಾಂನಲ್ಲಿ ಮಗುವಿನ ಕೈ ಹಿಡಿದುಕೊಂಡಿರುವ ಫೋಟೋವನ್ನು ಅಪ್ ಲೋಡ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

“ಇಂದು ಬೆಳಗ್ಗೆ ನಮ್ಮ ಏಂಜೆಲ್ ಜನಿಸಿದ್ದಾರೆ. ನನ್ನ ಹೆಣ್ಣು ಮಗು. ನಿಮ್ಮ ಪ್ರೀತಿ ಹಾಗೂ ಆಶೀರ್ವಾದಕ್ಕೆ ಧನ್ಯವಾದಗಳು” ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

ಸಮೀರಾ ರೆಡ್ಡಿ 2014ರಲ್ಲಿ ಉದ್ಯಮಿ ಅಕ್ಷಯ್ ವಾರ್ದೆ ಅವರನ್ನು ವಿವಾಹವಾಗಿದ್ದು, ದಂಪತಿಗಳಿಗೆ ಈಗಾಗಲೇ ಓರ್ವ ಪುತ್ರನಿದ್ದಾನೆ. ವಿವಾಹದ ಬಳಿಕ ಸಮೀರಾ ಚಿತ್ರರಂಗದಿಂದ ದೂರ ಸರಿದಿದ್ದಾರೆ.

ಸಮೀರಾ ರೆಡ್ಡಿ ಗರ್ಭಿಣಿಯಾಗಿರುವ ತಮ್ಮ ವಿವಿಧ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ಎರಡನೆ ಮುಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ಸಂಭ್ರಮ ಹಂಚಿಕೊಂಡಿದ್ದರು. ಇತ್ತೀಚೆಗಷ್ಟೇ ಅಂದರೆ 9ನೇ ತಿಂಗಳಿನಲ್ಲಿ ಸಮೀರಾ ಬಿಕಿನಿ ಧರಿಸಿ ಅಂಡರ್ ವಾಟರ್ ಫೋಟೋಶೂಟ್ ಮಾಡಿಸಿ, ಆ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ಭಾರೀ ವೈರಲ್ ಆಗಿತ್ತು.

ಎರಡನೇ ಮಗುವಿಗೆ ಜನ್ಮ ನೀಡಿದ ಸಮೀರಾ ರೆಡ್ಡಿ: ಫೋಟೋ ಶೇರ್ ಮಾಡಿ ಸಂತಸ ಹಂಚಿಕೊಂಡ ನಟಿ
Sameera Reddy shares first photo of baby girl