ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ: ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೈ ಸಿಸಿಬಿ ವಶಕ್ಕೆ…

ಬೆಂಗಳೂರು,ಸೆಪ್ಟಂಬರ್,16,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೈ ಅವರನ್ನ ಸಿಸಿಬಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.jk-logo-justkannada-logo

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ಸಂಜನಾ ಹಾಗೂ ನಟಿ ರಾಗಿಣಿ ಸಿಲುಕಿದ್ದು ನಟಿ ರಾಗಿಣಿ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಇಂದು ವಿಚಾರಣೆಗೆ ಹಾಜರಾಗುವಂತೆ ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೈಗೆ ಸಿಸಿಬಿ ನಿನ್ನೆ ನೋಟೀಸ್ ನೀಡಿದ್ದರು.

ಈ ಹಿನ್ನೆಲೆ ಇಂದು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ದಿಗಂತ್ ಐಂದ್ರಿತಾ ದಂಪತಿ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಇಬ್ಬರನ್ನೂ ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಗೆಯೇ ಇಬ್ಬರ ಮೊಬೈಲ್ ಅನ್ನು ಸಹ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words:  Sandalwood –Drugs- -Actor Diginth – actress- Aindrita Rai -detained – CCB.