ವಿಡಿಯೋ ಬಳಸಿ ಎಂಎಲ್ ಸಿ ಮತ್ತು ಸಚಿವರೊಬ್ಬರಿಂದ ಸಂತೋಷ್ ಗೆ ಬ್ಲಾಕ್ ಮೇಲ್- ಹೊಸ ಬಾಂಬ್ ಸಿಡಿಸಿದ ಡಿ.ಕೆ ಶಿವಕುಮಾರ್

ಕಾರವಾರ,ನವೆಂಬರ್,28,2020(www.justkannada.in): ‘ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಗಂಭೀರವಾದ ವಿಚಾರ. ಸಂತೋಷ ಅವರನ್ನು ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರೊಬ್ಬರು ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂಬ ಸುದ್ದಿ ಎರಡು ತಿಂಗಳಿಂದ ಹರಿದಾಡಿತ್ತು. ಇದರಲ್ಲಿ ಸಾಕಷ್ಟು ಗೌಪ್ಯ ಅಡಗಿವೆ. ಈ ಪ್ರಕರಣವನ್ನು ಸರ್ಕಾರ ತನಿಖೆ ನಡೆಸುವುದರಲ್ಲಿ ಅರ್ಥವಿಲ್ಲ. ಉನ್ನತ ಮಟ್ಟದ ತನಿಖೆ ಅಗತ್ಯವಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಶನಿವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಿಷ್ಟು:

ಸಚಿವ, ವಿಧಾನ ಪರಿಷತ್ ಸದಸ್ಯರಿಂದ ಬೆದರಿಕೆ:

‘ಸಂತೋಷ್ ಆತ್ಮಹತ್ಯೆ ಯತ್ನ ವಿಚಾರ ನನಗೆ ಗೊತ್ತಿದೆ. ಅವರ ಯಾವುದೋ ಒಂದು ವಿಡಿಯೋವನ್ನು ಬಳಸಿ ಒಬ್ಬ ಸಚಿವ ಹಾಗೂ ಎಂಎಲ್ ಸಿ ಬೆದರಿಕೆ ಹಾಕುತ್ತಿದ್ದರು. ಆ ವಿಡಿಯೋವನ್ನು ದೆಹಲಿ ನಾಯಕರಿಗೂ ಕೊಟ್ಟಿದ್ದಾರೆ ಎಂಬ ಮಾಹಿತಿ ಎರಡು ಮೂರು ತಿಂಗಳ ಹಿಂದೆಯೇ ತಿಳಿದಿತ್ತು. ಈ ಬಗ್ಗೆ ಅವರಿಗೆ ಬೇಸರವಾಗಿದೆ ಅಂತಾ ತಿಳಿದುಬಂದಿದೆ. ಈ ವಿಡಿಯೋ ಯಾರು ಕೊಟ್ಟಿದ್ದಾರೆ ಎಂಬುದು ಉನ್ನತ ಮಟ್ಟದ ತನಿಖೆ ಮೂಲಕ ಬಹಿರಂಗವಾಗಲಿ ಎಂದು ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಪ್ರಕರಣ ಸರ್ಕಾರ ತನಿಖೆ ಅರ್ಥವಿಲ್ಲ. ಇದರಲ್ಲಿ ಸಾಕಷ್ಟು ಗೌಪ್ಯ ವಿಚಾರಗಳು ಅಡಗಿರುತ್ತವೆ. ಸಂತೋಷ್ ಅವರಿಗೆ ಬೆದರಿಸಿರಬಹುದು. ಸಿಎಂ ಅವರನ್ನು ಬೆದರಿಸಿರುವ ಸಾಧ್ಯತೆಗಳು ಇವೆ. ಆ ಎಂಎಲ್ ಸಿ ಹಾಗೂ ಸಚಿವರು ಇಬ್ಬರು ಬೆದರಿಸುತ್ತಿದ್ದರು ಎಂಬ ಮಾಹಿತಿ ಇತ್ತು. ಹೀಗಾಗಿ ಇದರಲ್ಲಿ ಉನ್ನತ ಮಟ್ಟದ ತನಿಖೆ ಅಗತ್ಯವಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಕಟೀಲ್ ಅವರನ್ನು ಆಸ್ಪತ್ರೆಗೆ ಸೇರಿಸುವ ಅನಿವಾರ್ಯತೆ ಇದೆ:

ಸಿದ್ದರಾಮಯ್ಯ ಅವರು ಮಾದಕ ದ್ರವ್ಯ ಹಣದಿಂದ ಸರ್ಕಾರ ನಡೆಸುತ್ತಿದ್ದಾರೆ, ಇದುವರೆಗೂ ಯಾಕೆ ಎಫ್ ಐಆರ್ ದಾಖಲಿಸಿಲ್ಲ? ನಳಿನ್ ಕುಮಾರ್ ಗೆ ಹೆಚ್ಚುಕಮ್ಮಿ ಆಗಿರಬೇಕು. ಅವರನ್ನು ಆಸ್ಪತ್ರೆಗೆ ಸೇರಿಸುವ ಅನಿವಾರ್ಯತೆ ಇದೆ.

ಡ್ರಗ್ಸ್ ಪ್ರಕರಣದಲ್ಲಿ ನಟಿಯರನ್ನು ಜೈಲಿಗೆ ಹಾಕಿದ್ದಾರೆ. ನಾನು ಸಿದ್ದರಾಮಯ್ಯ ಅವರ ಸರ್ಕಾರದ ಭಾಗವಾಗಿದ್ದೆ, ನಮ್ಮ ಮೇಲೆ ಯಾಕೆ ಎಫ್ಐಆರ್ ಹಾಕಿಲ್ಲ? ಜವಾಬ್ದಾರಿಯುತ ಸ್ಥಾನದಲ್ಲಿ ಕೂತಿರುವ ಕಟೀಲ್ ಆ ಸ್ಥಾನಕ್ಕೆ ಗೌರವ ತರುವಂತೆ ನಡೆದುಕೊಳ್ಳಲಿ. ಅವರಿಗೆ ಅಲ್ಪಸ್ವಲ್ಪ ರಾಜಕೀಯ ಜ್ಞಾನ ಇದೆ ಎಂದುಕೊಂಡಿದ್ದೆ. ಒಂದು ಸರ್ಕಾರವನ್ನು ಡ್ರಗ್ಸ್ ಹಣದಿಂದ ನಡೆಸಲಾಗುತ್ತದೆ ಎಂಬ ಹೇಳಿಕೆ ಅವರ ಸ್ಥಾನಕ್ಕೆ ಕಳಂಕ ತರುವಂತಿದೆ ಎಂದು ಕಿಡಿಕಾರಿದರು.

ಬಿಜೆಪಿ ಆಂತರಿಕ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡಲ್ಲ:

ಗ್ರಾಮ ಪಂಚಾಯಿತಿ, ತಾಲೂಕು, ಜಿಲ್ಲಾ ಪಂಚಾಯಿತಿ ಹಾಗೂ ಉಪ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ನಾನು ರಾಜ್ಯ ಪ್ರವಾಸ ಆರಂಭಿಸಿದ್ದೇನೆ. ಮೊದಲು ನಮ್ಮ ಮನೆ ಸರಿ ಮಾಡಿಕೊಳ್ಳುತ್ತಿದ್ದು, ಮಿಕ್ಕಿದ್ದು ಆಮೇಲೆ. ನಾವು ವಿರೋಧ ಪಕ್ಷದವರು. ನಮಗೂ ಬಿಜೆಪಿ ಆಂತರಿಕ ಬೆಳವಣಿಗೆಗೂ ಯಾವುದೇ ಸಂಬಂಧವಿಲ್ಲ. ನಾವು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಅವರು ಸರ್ಕಾರದಲ್ಲಿ ಯಾರನ್ನಾದರೂ ಸೇರಿಸಿಕೊಳ್ಳಲಿ ಅಥವಾ ತೆಗೆದುಹಾಕಲಿ ಅದಕ್ಕೂ ನಮಗೂ ಸಂಬಂಧ ಇಲ್ಲ. ಆದರೆ ಒಂದಂತೂ ನಿಜ. ನಮ್ಮ ಪಕ್ಷದಿಂದ ಕೆಲವರು ಅಲ್ಲಿಗೆ ಹೋಗಿದ್ದಾರೆ. ನಾವು ಅನುಭವಿಸಿದ್ದನ್ನು ಅವರೂ ಅನುಭವಿಸುತ್ತಾರೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು. Santhosh –suciude- attempt- case- MLC –minister- using –video-kpcc president- DK Shivakumar

ಬೂತ್ ಮಟ್ಟದಲ್ಲಿ ಕೆಲಸ ಮಾಡುವವರಿಗೆ ಅವಕಾಶ:

ಉತ್ತರ ಕನ್ನಡದಲ್ಲಿ ನಮ್ಮ ಸರ್ಕಾರ ಇದ್ದಾಗ ಅನೇಕ ಕೆಲಸ ಮಾಡಿದ್ದೆವು. ಆದರೂ ನಮಗೆ ನಿರೀಕ್ಷಿತ ಫಲಿತಾಂಶ ಬರಲಿಲ್ಲ. ಈ ಬಗ್ಗೆ ನಾವು ಗಮನಹರಿಸುತ್ತೇವೆ. ಪಕ್ಷದಲ್ಲಿ ಈಗ ಬೂತ್ ಮಟ್ಟದಲ್ಲಿ ಯಾರು ಕೆಲಸ ಮಾಡುವುದಿಲ್ಲವೋ ಅವರನ್ನು ತೆಗೆದು ಅಲ್ಲಿ ಹೊಸಬರಿಗೆ ಅವಕಾಶ ನೀಡುತ್ತೇವೆ. ಕಾಂಗ್ರೆಸ್ ನಲ್ಲಿ ಯಾವುದೇ ಬಣ ಇಲ್ಲ. ಇರೋದು ಒಂದೇ ಬಣ, ಅದು ಕಾಂಗ್ರೆಸ್ ಬಣ ಎಂದರು.

English summary…

D. K. Shivakumar alleges Santhosh was blackmailed by an MLC and a Minister using a video
Karwar, Nov. 28, 2020 (www.justkannada.in): “The suicide attempt by Santhosh, Personal Secretary to the Chief Minister is a very serious issue. There were rumours from the last two months that he was being blackmailed by a MLC and a Minister using a video. There are so many hidden secrets in this case. There is no meaning in an investigation done by the government. There is a need for an investigation from a higher-level authority,” opined KPCC President D.K. Shivakumar.Santhosh –suciude- attempt- case- MLC –minister- using –video-kpcc president- DK Shivakumar
He spoke to the media persons on Saturday. “I am aware that Santhosh who is the personal secretary of the Chief Minister has attempted to commit suicide. From the last two-three months I had heard that he was being blackmailed by a MLC and a Minister showing him a video. I also heard that video has been also sent to the leaders in Delhi and he was upset about this. But there is a need to know who gave that video, a higher-level investigation is required in this case,” he said.
Keywords: Santhosh suicide/ CMs PA/ D.K. Shivakumar/ high-level investigation

Key words: Santhosh –suciude- attempt- case- MLC –minister- using –video-kpcc president- DK Shivakumar