ಸ್ಯಾಂಟ್ರೋ ರವಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಪೊಲೀಸರ ವಶಕ್ಕೆ ಕಾರು ಚಾಲಕ.

Promotion

ಮೈಸೂರು,ಜನವರಿ,12,2022(www.justkannada.in):  ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಉದ್ಯಮಿ ಕೆ.ಎಸ್.ಮಂಜುನಾಥ ಅಲಿಯಾಸ್​ ಸ್ಯಾಂಟ್ರೋ ರವಿ ಸಲ್ಲಿಸಿದ  ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮೈಸೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  ಜನವರಿ 17ಕ್ಕೆ ಮುಂದೂಡಿಕೆ  ಮಾಡಿದೆ.

ಸ್ಯಾಂಟ್ರೋ ರವಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಕೋರ್ಟ್ ನಲ್ಲಿ ನಡೆಯಿತು. ವಿಚಾರಣೆ ವೇಳೆ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ವಕೀಲರು ಕಾಲಾವಕಾಶ ಕೇಳಿದ ಹಿನ್ನಲೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿ ವಿಚಾರಣೆಯನ್ನು ಜನವರಿ 17ಕ್ಕೆ ಕೋರ್ಟ್ ಮುಂದೂಡಿದೆ.

ಈ ಮಧ್ಯೆ ಸ್ಯಾಂಟ್ರೋ ರವಿ ಕಾರು ಚಾಲಕ ಗಿರೀಶ್ ​ನನ್ನು ರಾಮನಗರ ಎಸ್ ​ಪಿ ಸಂತೋಷ್​ ಬಾಬು ನೇತೃತ್ವದ ತಂಡ ವಶಕ್ಕೆ ಪಡೆಯಲಾಗಿದೆ. ರಾಮನಗರ ಜಿಲ್ಲೆಯ ರೆಸಾರ್ಟ್, ಹೋಮ್​ಸ್ಟೇಗಳಲ್ಲಿ ಶೋಧ ನಡೆಸುತ್ತಿದ್ದಾಗ ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.  ರಾಜ್ಯದ ಹಲವೆಡೆ ಸ್ಯಾಂಟ್ರೋ ರವಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದ್ದು, ಕರ್ನಾಟಕ-ಕೇರಳ ಗಡಿ ಭಾಗದಲ್ಲೂ ಶೋಧ ನಡೆಸಲಾಗುತ್ತಿದೆ.

Key words: Santro Ravi – bail -application -hearing –adjourned-mysore-court