ಆರೋಪಿ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು: ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್.

Promotion

ಬೆಂಗಳೂರು,ಜನವರಿ,27,2023(www.justkannada.in): ಅಕ್ರಮ ವರ್ಗಾವಣೆ, ವೇಶ್ಯಾವಾಟಿಕೆ ಪ್ರಕರಣ ಆರೋಪದ ಮೇಲೆ ಬಂಧಿತನಾಗಿ ಸಿಐಡಿ ವಶದಲ್ಲಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಗರ್ ಬಿಪಿಯಿಂದ ಸ್ಯಾಂಟ್ರೋ ರವಿ ಬಳಲುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ವೈದ್ಯರು ಸ್ಯಾಂಟ್ರೋ ರವಿಯನ್ನ ಅಬ್ಸರ್ ​ವೇಶನ್ ​ನಲ್ಲಿ ಇಟ್ಟಿದ್ದಾರೆ.

ನಿನ್ನೆ ಸಂಜೆ  ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದ್ದು,  ಕೂಡಲೇ ಆತನನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅತ್ಯಾಚಾರ, ವೇಶ್ಯಾವಾಟಿಕೆ, ವಂಚನೆ, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಸ್ಯಾಂಟ್ರೋ ರವಿ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ.

Key words: Santro Ravi-health- shift -Victoria Hospital.