ಸೆ.22ರಂದು ತೆಲುಗಿನಲ್ಲಿ ಬಿಡುಗಡೆಯಾಗಲಿದೆ ‘ಸಪ್ತ ಸಾಗರದಾಚೆ ಎಲ್ಲೋ’

Promotion

ಬೆಂಗಳೂರು, ಸೆಪ್ಟೆಂಬರ್ 15, 2023 (www.justkannada.in): ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಇದೀಗ ತೆಲುಗಿನಲ್ಲೂ ಬಿಡುಗಡೆಯಾಗಲು ಸಜ್ಜಾಗಿದೆ.

ಸಪ್ತ ಸಾಗರದಾಚೆ ಎಲ್ಲೋ: ಸೈಡ್ ಎ ಚಿತ್ರವು ಸೆಪ್ಟೆಂಬರ್ 22 ರಂದು ತೆಲುಗಿನಲ್ಲಿ ‘ಸಪ್ತ ಸಾಗರಾಲು ದಾಟಿ’ ಎಂಬ ಶೀರ್ಷಿಕೆಯಲ್ಲಿ ಬಿಡುಗಡೆಯಾಗಲಿದೆ.

ಚಿತ್ರಕ್ಕೆ ಸಿನಿಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಜತೆಗೆ ಥಿಯೇಟರ್ ಗಳಲ್ಲಿ ಇನ್ನು ಉತ್ತಮ ಪ್ರದರ್ಶನ ಕಾಣುತ್ತಿದೆ. ಇದೀಗ ತೆಲುಗಿನಲ್ಲಿ ಬಿಡುಗಡೆಯಾಗಲು ಚಿತ್ರ ಸಜ್ಜಾಗಿದೆ.

ಅಂದಹಾಗೆ ಚಿತ್ರ ಸೆಪ್ಟೆಂಬರ್ 1ರಂದು ಬಿಡುಗಡೆಯಾಗಿತ್ತು.  ಹೇಮಂತ್ ಎಂ ರಾವ್ ನಿರ್ದೇಶನ, ಚರಣ್ ರಾಜ್ ಸಂಗೀತಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.