ವೀಡಿಯೋ ಕಾನ್ಫರೆನ್ಸ್’ನಿಂದ ಕೊರೊನಾ ಕಂಟ್ರೋಲ್’ಗೆ ಬರುತ್ತಾ?: ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಸಾರಾ ಅಸಮಾಧಾನ

ಮೈಸೂರು, ಮೇ 16, 2021 (www.justkannada.in): ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಹೆಚ್ಚಳವಾಗ್ತಿದೆ. ಕೊರೊನಾ ನಿಯಂತ್ರಣ ಮಾಡುವಲ್ಲಿ ಜಿಲ್ಲಾಡಳಿತ ವಿಫಲವಾಗುತ್ತಿದೆ ಎಂದು ಶಾಸಕ ಸಾರಾ ಮಹೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವೆಂಟಿಲೇಟರ್‌ಗಾಗಿ ರೋಗಿಗಳು ಕಾಯುತ್ತಿದ್ದಾರೆ ಅಂತ ಜಿಲ್ಲಾಡಳಿತವೇ ನಿನ್ನೆ ಹೇಳಿದೆ. ಹಾಗಾದ್ರೆ ನಿರ್ವಹಣೆ ಹೇಗೆ…? ತಪಾಸಣೆ ಕೂಡ ಸರಿಯಾಗಿ ಆಗ್ತಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಶಾಸಕ ಸಾರಾ ಮಹೇಶ್ ದೂರಿದ್ದಾರೆ.

ಮನೆಯಲ್ಲೇ ಐಸೋಲೆಟ್ ಆಗಿರುವ ಸೋಂಕಿತರಿಗೆ ಮೆಡಿಸನ್ ತಲುಪುತಿಲ್ಲ. ಜಿಲ್ಲಾಡಳಿತ ಯಾವುದೇ ಸಹಕಾರ ನೀಡ್ತಿಲ್ಲ. ಕೈಯಿಂದ ಹಣ ಕೊಟ್ಟು ಮೆಡಿಸನ್ ತಗೋಳ್ಳಲಾಗುತ್ತಿದೆ. ಈಗಲೂ ಮೆಡಿಸನ್ ಬಂದಿಲ್ಲ. ಸೋಂಕಿತರಿಗೆ ಮೆಡಿಸನ್ ತಲುಪುತಿಲ್ಲ. ನೀವು ವಿಡಿಯೋ ಕಾನ್ಫರೆನ್ಸ್ ಮಾಡ್ತಿರಲ್ಲ. ಎನು ಪ್ರಯೋಜನ ಆಗ್ತಿದೆ ಎಂದು ಸಾರಾ ಮಹೇಶ್ ಪ್ರಶ್ನಿಸಿದ್ದಾರೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರ್ಯವೈಖರಿಗೆ ಸಾರಾ ಮಹೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಯಾವುದೇ ಟಾರ್ಗೆಟ್ ಕೊಟ್ಟಿಲ್ಲ. ನಮ್ಮ ಕ್ಷೇತ್ರದಲ್ಲಿ ನಮಗೆ ಜನ ಮುಖ್ಯ. ನಾವು ಕೆಲ ಸಂಘಸಂಸ್ಥೆಗಳ ಸಹಕಾರದೊಂದಿಗೆ ನಾವು ಮೆಡಿಸನ್ ಕೊಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಜಿಲ್ಲಾಡಳಿತ ಯಾವುದೇ ಸಹಕಾರ ಸಿಗುತ್ತಿಲ್ಲ. ಮೈಸೂರು ಮಟ್ಟದಲ್ಲಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಅಂತಿದ್ದಾರೆ. ಆದರೆ ಇದುವರೆಗೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಸಾರಾ ಮಹೇಶ್ ಆರೋಪಿಸಿದ್ದಾರೆ.

ರಾಜ್ಯದ ಸಿಎಂ, ರಾಷ್ಟ್ರದ ಪಿಎಂ ಮನೆಯಲ್ಲಿ ಈಜುಕೊಳ ಇದೆಯಾ ? ಮೈಸೂರು ಡಿಸಿಗೆ ಸಾರಾ ಪ್ರಶ್ನೆಗಳ ಸುರಿಮಳೆ !

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಶಾಸಕ ಸಾ.ರಾ. ಮಹೇಶ್ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಒಬ್ಬ ಕನ್ನಡಿಗ ದಲಿತ ಡಿಸಿಯನ್ನು 28 ದಿನಕ್ಕೆ ವರ್ಗಾವಣೆ ಮಾಡಿಸಿದ್ದು ಸುಳ್ಳ? ನಿಮ್ಮ ಹಾಸನದ ಪ್ರಕರಣದಲ್ಲಿ ತಕ್ಷಣ ನಿಮ್ಮ ಪರ ತೀರ್ಪು ಬಂತು. ಈಗ ಅದರ ತೀರ್ಪು ಬರದಂತೆ ಸಿಎಟಿ ಮ್ಯಾನೇಜ್ ಮಾಡಿದ್ದು ಸುಳ್ಳ ? ವಾಲ್ಮಿಕಿ ಜಯಂತಿ ಆಚರಣೆಗೆ ಬರಲಿಲ್ಲ , ಆದರೆ ಬಂಡೀಪುರಕ್ಕೆ ಹೋದರು ಸುಳ್ಳಾ.? ಮಾತ್ರೆ ಕೊಡಲು ದುಡ್ಡಿಲ್ಲ. ಕೊರೊನಾ ಸಂದರ್ಭದಲ್ಲಿ ಇನ್ ಡೋರ್ ಜಿಮ್ ಇನ್ ಡೋರ್ ಸ್ವಿಮ್ಮಿಂಗ್ ಪೂಲ್ ಏಕೆ ? ಹೀಗೆ ಹತ್ತಾರು ಪ್ರಶ್ನೆಗಳನ್ನು ಸುದ್ದಿಗೋಷ್ಠಿ ನಡೆಸಿ ಕೇಳಿದ್ದಾರೆ.

ಪಾರಂಪರಿಕ ಕಟ್ಟಡದಲ್ಲಿ ಈಜುಕೊಳಕ್ಕೆ ಅನುಮತಿ ಕೊಟ್ಟವರು ಯಾರು.? ಇದಕ್ಕೆ ಹಣ ಎಲ್ಲಿಂದ ಬಂತು? ಅದು ಕಟ್ಟಿರೋದು ಸುಳ್ಳಾ? ರಾಜ್ಯದ ಸಿಎಂ ರಾಷ್ಟ್ರದ ಪಿಎಂ ಮನೆಯಲ್ಲಿ ಈಜುಕೊಳ ಇದೆಯಾ ? ರಾಜ್ಯ ಮುಖ್ಯ ಕಾರ್ಯದರ್ಶಿ ಮನೆಯಲ್ಲಿ ಇದೆಯಾ ? ನಾವು ನೀವು ಜನರಿಗೆ ಮಾದರಿಯಾಗಿರಬೇಕು. ಕರ್ನಾಟಕದ ಹಣ ತಿರುಪತಿಗೆ ಕೊಟ್ಟಿದ್ದು ಸುಳ್ಳ?ಐಎಎಸ್ ಅಧಿಕಾರಿಗಳ ಬೇಜವಾಬ್ದಾರಿಯಿಂದ ರಾಜ್ಯ ಹೊತ್ತಿ ಉರಿದಿದ್ದು ಸುಳ್ಳ? ಈಜುಕೊಳದ 50 ಲಕ್ಷ ಕೊರೊನಾಗೆ ಬಳಸಬೇಕಿತ್ತು. ನಿಮ್ಮನ್ನು ಯಾರು ಕೇಳಬೇಕು ಎಂದು ಸಾರಾ ಮಹೇಶ್ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಇಂತಹ ಪರಿಸ್ಥಿತಿಯಲ್ಲೂ ಮೈಸೂರಿನಲ್ಲಿ ಶಾಸಕರು ಪಾಲಿಕೆ ಸದಸ್ಯರು ಕೆಲಸ ಮಾಡುತ್ತಿರುವುದಕ್ಕೆ ಕ್ಷಮೆ ಕೇಳಬೇಕಾ? ಇದಕ್ಕೆ ಸೂಕ್ತ ವೇದಿಕೆಯಲ್ಲಿ ತಕ್ಕ ಉತ್ತರ ನೀಡುವೆ. ಇದೆಲ್ಲಾ ಏನೇ ಇರಲಿ ನೊಂದವರ ನಿಟ್ಟುಸಿರು ತಟ್ಟದೆ ಬಿಡುವುದಿಲ್ಲ ಎಂದಿದ್ದಾರೆ.

ಕ್ರಮ ಯಾಕೆ ಇಲ್ಲ?

ಕೆ ಆರ್ ನಗರದಲ್ಲಿ ಸಾವಿನ ಪ್ರಮಾಣ ಹೆಚ್ಚು ವಿಚಾರಕ್ಕೆ ಸಂಬಂಧಿಸಿದಂತೆ ಅಲ್ಲಿನ ವೈದ್ಯರು ಹೆಚ್ಚಿನ ಪ್ರಮಾಣದಲ್ಲಿ ಸ್ಟಿರಾಯೆಡ್ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಇದು ಗೊತ್ತಿದ್ದರೆ ಕ್ರಮ ಏಕೆ ಕೈಗೊಂಡಿಲ್ಲ? ಎಂದು ಸಾ ರಾ ಮಹೇಶ್ ಪ್ರಶ್ನಿಸಿದ್ದಾರೆ.

ಇದಕ್ಕೆ ಜವಾಬ್ದಾರರು ಯಾರು.? ಇದನ್ನು ಕೇಳುವುದೇ ತಪ್ಪಾಗಿದೆ. ವಿರೋಧ ಪಕ್ಷದವರು ಎಚ್ಚರಿಸುವ ಕೆಲಸ ಮಾಡುತ್ತೇವೆ. ಎಲ್ಲಕ್ಕೂ ಕಾಲವೇ ಉತ್ತರ ನೀಡಲಿದೆ. ಇಲ್ಲಿ ಯಾರು ಶಾಶ್ವತ ಅಲ್ಲ ಕಾಲ ಚಕ್ರ ಉರುಳುತ್ತದೆ. ಕೋವಿಡ್ ಮುಗಿಯಲಿ ಕೆಲ ದಾಖಲೆಗಳಿವೆ ಬಿಡುಗಡೆ ಮಾಡುವೆ. ಜಿಲ್ಲಾಧಿಕಾರಿಗಳ ವಿಚಾರವಾಗಿ ದಾಖಲೆ ಬಿಡುಗಡೆ ಮಾಡುವೆ. ಶಾಸಕಾಂಗ ಕಾರ್ಯಾಂಗದ ಮಾತು ಕೇಳಬೇಕು. ಇಂತಹ ಪರಿಸ್ಥಿತಿ ಮೈಸೂರಿನಲ್ಲಿ ನಿರ್ಮಾಣವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.