“ಎಸ್ಸಿ,ಎಸ್ಟಿ ಮತ್ತು ಓಬಿಸಿ ವಿದ್ಯಾರ್ಥಿಗಳ ಆದಾಯ ಮಿತಿ ಹೆಚ್ಚಿಸಿ” : ಮೈಸೂರು ವಿವಿ ಸಂಶೋಧಕರ ಸಂಘ ಆಗ್ರಹ

ಮೈಸೂರು,ಫೆಬ್ರವರಿ,17,2021(www.justkannada.in) : ಎಸ್ಸಿ,ಎಸ್ಟಿ ಮತ್ತು ಓಬಿಸಿ ವಿದ್ಯಾರ್ಥಿಗಳ ಆದಾಯ ಮಿತಿಯನ್ನು 2.5 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸುವಂತೆ ಸರ್ಕಾರವನ್ನು ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘವು ಆಗ್ರಹಿಸಿದೆ.jkಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಶೋಧಕರ ಸಂಘದ ಅಧ್ಯಕ್ಷ ಎಸ್.ಮರಿದೇವಯ್ಯ ಮಾತನಾಡಿ, ಈಗಿರುವ ಆದಾಯ ಮಿತಿಯನ್ನು 2.5 ಲಕ್ಷದಿಂದ 10 ಲಕ್ಷಕ್ಕೆ ಏರಿಸಬೇಕು. 2020-21ನೇ ಸಾಲಿನ ಎಸ್ಸಿ,ಎಸ್ಟಿ ವಿದ್ಯಾರ್ಥಿಗಳಿಗೆ ಕೂಡಲೇ ಸ್ಕಾಲರ್ ಶಿಪ್ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧಕರಿಗೆ ಸರ್ಕಾರ ಉಚಿತವಾಗಿ ಲ್ಯಾಪ್‌ಟಾಪ್ ನೀಡಬೇಕು. ವಿಶ್ವವಿದ್ಯಾನಿಲಯಗಳಲ್ಲಿ ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವ ಬ್ಯಾಕಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಈ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ತಪ್ಪಿದ್ದಲ್ಲಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

SC, ST-OBC-students-Income limit-Increase-Mysore VV-Researchers-Association-Demand

ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಪುರೋಷತ್ತಮ್, ಸಂಘದ ಉಪಾಧ್ಯಕ್ಷ ಅರುಣ್ ಕುಮಾರ್, ಕಿರಣ್, ಪ್ರಸಾದ್ ಉಪಸ್ಥಿತರಿದ್ದರು.

key words : SC, ST-OBC-students-Income limit-Increase-Mysore VV-Researchers-Association-Demand