ಭಾರಿ ಮಳೆ ಹಿನ್ನೆಲೆ: ಮೈಸೂರು, ಮಂಡ್ಯ, ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ.

ಮೈಸೂರು,ಮೇ,19,2022(www.justkannada.in): ರಾಜ್ಯದಲ್ಲಿ ಭಾರಿ ಮಳೆ ಹಿನ್ನೆಲೆ ಮೈಸೂರು, ಮಂಡ್ಯ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಳಗ್ಗೆಯಿಂದ ನಿರಂತರ ಮಳೆಯಾಗುತ್ತಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ಇಂದು ಒಂದು ದಿನ ರಜೆ ನೀಡಲಾಗಿದೆ. ಮೈಸೂರು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಡಿಡಿಪಿಐ ರಾಮಚಂದ್ರ ಮನವಿ ಮೇರೆಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗದಲ್ಲೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ.  ಮಂಡ್ಯ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆ ಕಾರಣ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆ, ಅಂಗನವಾಡಿಗಳಿಗೆ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಅಶ್ವಥಿ ಆದೇಶ ನೀಡಿದ್ದಾರೆ.

ಇನ್ನು ಬೆಂಗಳೂರು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯಲಿದೆ. ಇಂದಿನಿಂದ 2 ದಿನ ಕರ್ನಾಟಕ ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Key words: School -holiay-Mysore -Mandya -Shimoga –district-rain