ಶಾಲೆ ಆರಂಭ ವಿಚಾರ: ಸಿಎಂ ಬಿಎಸ್ ವೈ ನಿರ್ಧಾರವೇ ಅಂತಿಮ- ಶಿಕ್ಷಣ ಸಚಿವ ಸುರೇಶ್ ಕುಮಾರ್….

Promotion

ಬೆಂಗಳೂರು,ಡಿಸೆಂಬರ್, 19,2020(www.justkannada.in):  ರಾಜ್ಯದಲ್ಲಿ ಶಾಲೆ ಆರಂಭ ಕುರಿತು ಇಂದು ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಾಲೆ ಆರಂಭಕ್ಕೆ ಇದು ಸೂಕ್ತ ಸಮಯ ಎಂದು ತಜ್ಞರು ಸಲಹೆ ನೀಡಿದ್ದಾರೆ. ಇಂದು ಸಿಎಂ ಬಿಎಸ್ ವೈ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ ಎಂದು ತಿಳಿಸಿದ್ದಾರೆ.Teachers,solve,problems,Government,bound,Minister,R.Ashok

ಮಾಧ್ಯಮಗಳ ಜತೆ ಇಂದು ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಜನವರಿಯಲ್ಲಿ 10 ಮತ್ತು 12ನೇ ತರಗತಿ ಪ್ರಾರಂಭಕ್ಕೆ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ತಾಂತ್ರಿಕ ಸಲಹ ಸಮಿತಿ ವರದಿಯನ್ನ ಸಿಎಂಗೆ ನೀಡುತ್ತೇನೆ.  ಶಾಲೆ ಆರಂಭ ಬಗ್ಗೆ ಸಿಎಂ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಲಿದೆ. ಇಂದಿನ ಸಭೆ ಬಳಿಕ ಶಾಲೆ ಆರಂಭದ ಬಗ್ಗೆ ಸ್ಪಷ್ಟವಾದ ಮಾಹಿತಿ ಸಿಗಲಿದೆ ಎಂದರು.

ಜನವರಿಯಲ್ಲಿ ಶಾಲೆಗಳು ಆರಂಭವಾದರೇ ಜೂನ್ ನಲ್ಲಿ ಪರೀಕ್ಷೆ ಸಾಧ್ಯತೆ ಇರುತ್ತದೆ. ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ.  ಪರೀಕ್ಷೆಗೆ ಸಮಯಾವಕಾಶ ನೀಡುತ್ತೇವೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Key words: School –Start-Issue-CM BS yeddyurappa- decision – final-Education Minister -Suresh Kumar