ಶಾಲೆಗಳ ಆರಂಭ ವಿಚಾರ- ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ …

ಬೆಂಗಳೂರು,ಜು,28,2020(www.justkannada.in):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ, ಸದ್ಯಕ್ಕೆ ಶಾಲೆಗಳನ್ನ ತೆರೆಯದಿರಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.jk-logo-justkannada-logo

ಈ ಕುರಿತು ಇಂದು ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಸದ್ಯಕ್ಕೆ ಶಾಲೆಗಳನ್ನ ಓಪನ್ ಮಾಡಲ್ಲ.  ಈ ಕೊರೋನಾ ಪರಿಸ್ಥಿತಿಯಲ್ಲಿ  ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲವಾದರೂ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಎಲ್ಲ ಆಯಾಮಗಳಿಂದಲೂ ಪ್ರಯತ್ನ ಮಾಡಲಾಗುತ್ತದೆ. ಮಕ್ಕಳನ್ನ ಶಾಲೆಗೆ ಕಳುಹಿಸದೆ ಕಲಿಕೆ. ಮಕ್ಕಳ ಕಲಿಕೆಗೆ ಹೊಸ ಯೋಜನೆಗಳನ್ನ ರೂಪಿಸಲಾಗುತ್ತದೆ ಎಂದರು.schools-not-open-present-education-minister-suresh-kumar

ವಠಾರ ಶಾಲೆ, ಪಡಸಾಲೆ ಶಾಲೆ, ಮನೆಶಾಲೆ, ತಂತ್ರಜ್ಞಾನಾಧಾರಿತ ಶಿಕ್ಷಣ, ಆಕಾಶವಾಣಿ, ಚಂದನ ದೂರದರ್ಶನ ವಾಹಿನಿ, ಮಾಧ್ಯಮದ ಮೂಖಾಂತರವೂ ಪಾಠ ಮಾಡುವ ವ್ಯವಸ್ಥೆಯನ್ನೂ ಮಾಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.

Key words: Schools – not- open – present-education minister- suresh kumar