ಜುಲೈ 1ರಿಂದ ಶಾಲೆಗಳು ಆರಂಭ: ನಾಳೆಯಿಂದಲೇ ಕೆಲಸಕ್ಕೆ ಹಾಜರಾಗುವಂತೆ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಆದೇಶ.

kannada t-shirts

ಬೆಂಗಳೂರು,ಜೂನ್,14,2021(www.justkannada.in): ಜುಲೈ 1ರಿಂದ ಪ್ರಾಥಮಿಕ, ಪ್ರೌಢ ಶಾಲೆಗಳು ಆರಂಭಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿರುವ ಜಿಲ್ಲೆಗಳು ಹೊರತಾಗಿ ಉಳಿದ ಜಿಲ್ಲೆಗಳ ಶಿಕ್ಷಕರು ನಾಳೆಯಿಂದಲೇ ಕರ್ತವ್ಯಕ್ಕೆ ಹಾಜರಾಗುವಂತೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.jk

ಈ ಕುರಿತು ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ರಾಜ್ಯದಲ್ಲಿ ದಿನಾಂಕ : 01-07-2021 ರಿಂದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳನ್ನು ಪ್ರಾರಂಭಿಸಲು ಹಾಗೂ ಮಕ್ಕಳ ಕಲಿಕೆಗೆ ಪೂರ್ವ ತಯಾರಿಯನ್ನು ಶಿಕ್ಷಕರು ದಿನಾಂಕ : 15-06-2021 ರಿಂದ ಪ್ರಾರಂಭಿಸಲು ಉಲ್ಲೇಖ (1) ರ ಸುತ್ತೋಲೆಯಲ್ಲಿ ಈಗಾಗಲೇ ತಿಳಿಸಲಾಗಿದೆ.

ಉಲ್ಲೇಖ (2) ರಂತೆ ಕೋವಿಡ್-19 ರ ಹಿನ್ನಲೆಯಲ್ಲಿ ವಿಧಿಸಲಾಗಿರುವ ಕಠಿಣ ನಿರ್ಬಂಧಗಳನ್ನು ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕೋಡಿ (ಶೈಕ್ಷಣಿಕ ಜಿಲ್ಲೆ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದುವರೆಸಲಾಗಿದ್ದು, ಸದರಿ ಜಿಲ್ಲೆಗಳ ಎಲ್ಲಾ ಶಾಲಾ ಶಿಕ್ಷಕರು ಉಲ್ಲೇಖ (1) ಮತ್ತು (3) ರಂತೆ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವ ಮತ್ತು ಪ್ರಸ್ತುತ ಸಾಲಿನ ಶೈಕ್ಷಣಿಕ ವರ್ಷದ ಪೂರ್ವ ತಯಾರಿ ಕಾರ್ಯಗಳನ್ನು ಮಾಡಿಕೊಳ್ಳಲು ತಮ್ಮ ಮನೆಗಳಿಂದ ಕಾರ್ಯನಿರ್ವಹಿಸಲು ಕೋರಿದೆ. ಕಠಿಣ ನಿರ್ಬಂಧಗಳನ್ನು ಭಾಗಶಃ ತೆರವುಗೊಳಿಸಿದ ತಕ್ಷಣವೇ ಶಿಕ್ಷಕರು ಶಾಲೆಗಳಿಗೆ ತೆರಳಿ ಉಲ್ಲೇಖ (I) ಮತ್ತು (3) ರ ಸುತ್ತೋಲೆಯಲ್ಲಿನ ಎಲ್ಲಾ ಅಂಶಗಳನ್ನು ಪಾಲಿಸತಕ್ಕದ್ದು.

ಸದರಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿನ ಎಲ್ಲಾ ಶಾಲಾ ಶಿಕ್ಷಕರು ದಿನಾಂಕ : 15-06-2021 ರಿಂದ ಉಲ್ಲೇಖ (1) ಮತ್ತು (3) ರಂತೆ ಕಾರ್ಯಪ್ರವೃತ್ತರಾಗಲು ಕೋರಿದೆ. ಈ ಎಲ್ಲಾ ಅಂಶಗಳ ಕುರಿತು ಅನುಪಾಲನೆ ಮಾಡಲು ಎಲ್ಲಾ ಉಪನಿರ್ದೇಶಕರು (ಆಡಳಿತ) ಮತ್ತು (ಅಭಿವೃದ್ಧಿ) ರವರಿಗೆ ಸೂಚಿಸಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Key words: Schools -start -July 1- Education Department – ordered -teachers – attend- work

website developers in mysore