ದ್ವಿತೀಯ ಪಿಯು ಫಲಿತಾಂಶ: ತೇರ್ಗಡೆಯಾಗದ ವಿದ್ಯಾರ್ಥಿಗಳಿಗೆ ಟ್ವೀಟ್ ಮೂಲಕ ಆತ್ಮವಿಶ್ವಾಸ ತುಂಬಿದ ಸಿಎಂ ಬಿಎಸ್ ವೈ…

Promotion

ಬೆಂಗಳೂರು,ಜು,14,2020(www.justkannada.in):  ಕೊರೋನಾದಂತಹ ಸಂಕಷ್ಟದ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದು ಫಲಿತಾಂಶ ಪ್ರಕಟಗೊಂಡಿದ್ದು ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಶುಭ ಹಾರೈಸಿದ್ದಾರೆ.second-pu-result-cm-bs-yeddyurappa-students

ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ ಹಿನ್ನೆಲೆ ಟ್ವೀಟ್ ಮಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿರುವ ಸಿಎಂ ಬಿಎಸ್ ಯಡಿಯೂರಪ್ಪ,  ಇಂದು ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಪಡೆದ ಎಲ್ಲ ಮಕ್ಕಳಿಗೂ ಶುಭ ಹಾರೈಸುತ್ತೇನೆ. ತೇರ್ಗಡೆಯಾಗಿರುವ ಮಕ್ಕಳಿಗೆ ಅಭಿನಂದನೆಗಳು. ಸ್ವಲ್ಪ ಹಿನ್ನಡೆಯಾಗಿದ್ದಲ್ಲಿ ಧೈರ್ಯ, ವಿಶ್ವಾಸ ಕಳೆದುಕೊಳ್ಳದೆ, ಹಿನ್ನಡೆಯನ್ನು ಸವಾಲಾಗಿ ಸ್ವೀಕರಿಸಿ, ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಿ. ತಂದೆ- ತಾಯಿಗಳಿಗೆ ಹೆಮ್ಮೆ, ದೇಶಕ್ಕೆ ಕೀರ್ತಿ ತರುವ ಸಾಧನೆ ಮಾಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ  ವಿಶ್ವಾಸ ತುಂಬಿದ್ದಾರೆ.

 

Key words: Second PU –result-CM BS Yeddyurappa- students