ನಾಳೆಯಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ: ಮೈಸೂರು ಜಿಲ್ಲೆಯಲ್ಲಿ ಸಕಲ ಸಿದ್ದತೆ…

ಮೈಸೂರು.ಮಾ,3,2020(www.justkannada.in):  ನಾಳೆಯಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಪ್ರಾರಂಭವಾಗಲಿದ್ದು ಮೈಸೂರು ಜಿಲ್ಲೆಯಲ್ಲಿ ವಾರ್ಷಿಕ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಾಳೆಯಿಂದ   ಮಾರ್ಚ್ 23 ವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದ್ದು, ನಕಲು ಸೇರಿದಂತೆ ಪರೀಕ್ಷಾ ಅಕ್ರಮ ಚಟುವಟಿಕೆ ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಲಾಗಿದೆ.  ಪರೀಕ್ಷಾ ದಿನದಂದು ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ಜಿಲ್ಲಾ ಖಜಾನೆಯಿಂದ ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವ ವಾಹನಕ್ಕೆ ಜಿಪಿಎಸ್‌ ಅಳವಡಿಕೆ ಮಾಡಲಾಗಿದೆ.

ಮೈಸೂರು ಜಿಲ್ಲೆಯಾದ್ಯಂತ 50 ಪರೀಕ್ಷಾ ಕೇಂದ್ರಗಳಿವೆ. ಗ್ರಾಮೀಣಾ 24 ಪರೀಕ್ಷಾ ಕೇಂದ್ರಗಳು, ನಗರ 26 ಪರೀಕ್ಷಾ ಕೇಂದ್ರಗಳಲ್ಲಿ  ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ 200 ಮೀ. ವ್ಯಾಪ್ತಿಯಲ್ಲಿ144 ಕಲಂ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಎಕ್ಸಾಮ್ ಸೆಂಟರ್ ಸುತ್ತ ಅನುಮಾನಾಸ್ಪದವಾಗಿ ತಿರುಗಾಡುವುದು, ಝರಾಕ್ಸ್‌ ಅಂಗಡಿ, ಸೈಬರ್‌ ಕೆಫೆ, ಕಂಪ್ಯೂಟರ್‌ ಸೆಂಟರ್‌, ಕೋಚಿಂಗ್‌ ಸೆಂಟರ್‌ಗಳನ್ನು ಬಂದ್‌ ಮಾಡಿಸಲು ಪೊಲೀಸ್‌ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ 3 ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಈ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚುವರಿ ಪೊಲೀಸ್‌ ಸಿಬ್ಬಂದಿಗಳನ್ನ ನಿಯೋಜನೆ ಮಾಡಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ವಿಶೇಷ ಜಾಗೃತ ದಳದ ಸದಸ್ಯರುಗಳನ್ನ ನೇಮಿಸಲಾಗಿದ್ದು  ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಯ ಕಣ್ಗಾವಲಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಕಳೆದ ಬಾರಿ 58% ಫಲಿತಾಂಶ ಬಂದಿದ್ದು ಈ ಬಾರಿ 80% ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

Key words: Second PUC -annual exam – tomorrow-Mysore- district.