2020-21 ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟ.

Promotion

ಬೆಂಗಳೂರು,ಜುಲೈ,20,2021(www.justkannada.in): 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.jk

ಬೆಂಗಳೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಿದರು. ಫಲಿತಾಂಶಕ್ಕೆ ಮಾರ್ಗಸೂಚಿ ತಂತ್ರ ಅನುಸರಿಸಿ ಫಲಿತಾಂಶ ಪ್ರಕಟ ಮಾಡಲಾಗಿದೆ. ಎಸ್ ಎಸ್ ಎಲ್ ಸಿ +ಪ್ರಥಮ ಪಿಯುಸಿ+ದ್ವಿತೀಯ ಪಿಯುಸಿ ಕೃಪಾಂಕ ಪರಿಗಣಿಸಿ ಫಲಿತಾಂಶ ನೀಡಲಾಗಿದೆ. ಎಸ್ ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ರವಾನೆಯಾಗಲಿದೆ ಎಂದು ತಿಳಿಸಿದ್ದಾರೆ.

ಒಟ್ಟು 6,66,497 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. 3.35,138 ವಿದ್ಯಾರ್ಥಿಗಳು, 3.31,359 ವಿದ್ಯಾರ್ಥಿನೀಯರು ದ್ವಿತೀಯ ಪಿಯುಸಿ ಉತ್ತೀರ್ಣರಾಗಿದ್ದಾರೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಾರಿ ಪರೀಕ್ಷೆ ಇಲ್ಲದೆ ಎಲ್ಲಾ ದ್ವಿತೀಯ ಪಿಯು ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ. ರಾಜ್ಯದಲ್ಲಿ ಕೊರೋನಾ 2ನೇ ಅಲೆ ಹೆಚ್ಚಾದ ಹಿನ್ನೆಲೆ ದ್ವಿತೀಯ ಪಿಯು ಪರೀಕ್ಷೆಯನ್ನ ರದ್ದುಗೊಳಿಸಲಾಗಿತ್ತು.

Key words: Second PUC- results –announce-minister- suresh kumar