ಪಂಚಭೂತಗಳಲ್ಲಿ ಲೀನರಾದ ಹಿರಿಯನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ….

Promotion

ಬೆಂಗಳೂರು,ಮೇ,2,2019(www.justkannada.in); ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದ ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿಯಲ್ಲಿ ನೆರವೇರಿತು.

ಬೆಂಗಳೂರಿನ ಬನಶಂಕರಿ ಚಿತಗಾರದಲ್ಲಿ ಹಿರಿಯ ನಟ ಮಾಸ್ಟರ್ ಹಿರಣ್ಣಯ್ಯ ಅವರ ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು.  ಮಾ. ಹಿರಣ್ಣಯ್ಯ ಅವರ ಪುತ್ರರಾದ  ಗುರುನಾಥ ಹಿರಣ್ಣಯ್ಯ,  ಬಾಬು ಹಿರಣ್ಣಯ್ಯ, ಶ್ರೀಕಾಂತ್ ಹಿರಣ್ಣಯ್ಯ ಅಂತಿಮ ವಿಧಿವಿಧಾನ ನೆರವೇರಿಸಿದರು. ನಂತರ ಮಾಸ್ಟರ್ ಹಿರಣ್ಣಯ್ಯ ಅವರ ಚಿತೆಗೆ ಅಗ್ನಿ ಸ್ಪರ್ಶ ಮಾಡಲಾಯಿತು.

key words:senior actor Master Hirannayya-Funeral- Bangalore- banashankari