ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗುಡಿಹಳ್ಳಿ ನಾಗರಾಜ್ ನಿಧನ.

Promotion

ಬೆಂಗಳೂರು,ಆಗಸ್ಟ್,26,2021(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮತ್ತು ಪ್ರೆಸ್ ಕ್ಲಬ್ ಮಾಜಿ ಉಪಾಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್(66) ಬೆಂಗಳೂರಿನಲ್ಲಿ ನಿಧನರಾದರು.

ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್  ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶೇಷವಾಗಿ ರಂಗಭೂಮಿಗೆ ವಿಶೇಷ ಕೊಡುಗೆ ನೀಡಿದ್ದ ಗುಡಿಹಳ್ಳಿ, ಪ್ರಜಾವಾಣಿ ಪತ್ರಿಕೆಯಲ್ಲಿ ಸುಧೀರ್ಘ ಅವಧಿಗೆ ಕೆಲಸ ಮಾಡಿದವರು.

ಪತ್ರಕರ್ತರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ದುಡಿದವರು. ಕೆಯುಡಬ್ಲ್ಯೂಜೆ ಸಂಘಟನೆಯಲ್ಲಿ ಅವರ‌ ಸೇವೆ ಮರೆಯಲಾಗದು ಎಂದು ಶ್ಲಾಘಿಸಿರುವ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೆಯುಡಬ್ಲ್ಯೂಜೆ ಪ್ರಾರ್ಥಿಸಿದೆ.

Key words: Senior journalist- Gudihalli Nagaraj -passes away