ಪ್ರತ್ಯೇಕ ನಾಡಧ್ವಜ ವಿಚಾರ: ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರ ನಿಲುವಿಗೆ ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ…

ಬೆಂಗಳೂರು,ನವೆಂಬರ್,3,2020(www.justkannada.in):  ಪ್ರತ್ಯೇಕ ನಾಡ ಧ್ವಜ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು ಪ್ರತ್ಯೇಕ ನಾಡ ಧ್ವಜ ಅಂಗೀಕಾರಕ್ಕಾಗಿ ಪ್ರಧಾನಿಗೆ ಒತ್ತಡ ಹೇರುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಮತ್ತು ಸಂಸದರಿಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ಪ್ರತ್ಯೇಕ ನಾಡ ಧ್ವಜ ವಿಚಾರ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ  ಟ್ವೀಟ್ ಮಾಡಿದ್ದು, ಕೇಂದ್ರ ಬಿಜೆಪಿ ವಿರುದ್ಧ ಗರಂ ಆಗಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನ ನಾಡಧ್ವಜ ಹಾರಿಸದ ಕೆಲ ಜಿಲ್ಲಾಡಳಿತಗಳ ವಿರುದ್ಧವೂ  ಸಿದ್ದು ಅಸಮಾಧಾನ ವ್ಯಕ್ತಪಡಿಸಿದ್ದು,  ನಾಡ ಧ್ವಜ ವಿಚಾರದಲ್ಲಿ ಕೇಂದ್ರ ಬಿಜೆಪಿ ಹಾಗೂ ರಾಜ್ಯದ ಕೆಲ ನಾಯಕರ ನಿಲುವಿಗೆ ಸಿದ್ಧರಾಮಯ್ಯ ಕಿಡಿ ಕಾರಿದ್ದಾರೆ.Separate-nadadweaja- Former CM Siddaramaiah –outrage-bjp-Twitter

Separate-nadadweaja- Former CM Siddaramaiah –outrage-bjp-Twitter

ನಾನು ಮುಖ್ಯಮಂತ್ರಿಯಾಗಿದ್ದಾಗ ತಜ್ಞರ ಸಮಿತಿಯನ್ನು ಆಧರಿಸಿ ನಾಡಧ್ವಜವನ್ನು ವಿನ್ಯಾಸ ಮಾಡಿ ಅಂಗೀಕಾರಕ್ಕಾಗಿ ಕೇಂದ್ರಸರ್ಕಾರಕ್ಕೆ ಕಳಿಸಿದ್ದೆ. ಮೂರು ವರ್ಷಗಳಾದರೂ ಅದಕ್ಕೆ ಅಂಗೀಕಾರ ನೀಡದೆ ಇರುವುದು  ಕರ್ನಾಟಕದ ನಾಡಧ್ವಜದ ಬಗ್ಗೆ ಬಿಜೆಪಿ ಹೊಂದಿರುವ ಪೂರ್ವಗ್ರಹಕ್ಕೆ ಸಾಕ್ಷಿ ಎಂದು ಸಿದ್ಧರಾಮಯ್ಯ ಟ್ವಿಟ್ಟರ್ ನಲ್ಲಿ ಹರಿಹಾಯ್ದಿದ್ದಾರೆ.

ಹಾಗೆಯೇ  ಪ್ರತ್ಯೇಕ ನಾಡಧ್ವಜ ಹೊಂದಲು ಸಂವಿಧಾನದಲ್ಲಿ ಅವಕಾಶವಿದೆ. ಕನ್ನಡ ರಾಜ್ಯೋತ್ಸವದ ದಿನ ನಾಡ ಧ್ವಜವನ್ನು ರಾಜ್ಯಾದ್ಯಂತ ಹಾರಿಸುವ ಸಂಪ್ರದಾಯವನ್ನು ಹಿಂದಿನ ಎಲ್ಲ ಸರ್ಕಾರಗಳು ಪಾಲಿಸುತ್ತಾ ಬಂದಿವೆ. ಕಳೆದ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ನಾಡಧ್ವಜವನ್ನು ವಿರೋಧಿಸಿದ್ದು ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ಯಾರ ಕುಮ್ಮಕ್ಕು? ಎಂದು ಸಿದ್ಧರಾಮಯ್ಯ ಟೀಕಿಸಿದ್ದಾರೆ.

ನಾವು ಪ್ರತ್ಯೇಕ ಧ್ವಜ ಕೇಳುತ್ತಿಲ್ಲ. ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನದಲ್ಲಿ ಯಾವ ಅಡ್ಡಿಯೂ ಇಲ್ಲ. ಕೇಂದ್ರ ನಾಯಕರ ಅಭಿಪ್ರಾಯವೇನೇ ಇರಲಿ, ಆ ಪಕ್ಷದ ಸ್ಥಳೀಯ ನಾಯಕರು ಮತ್ತು ಸಂಸದರು ಪ್ರಧಾನಿ ಮೇಲೆ ಒತ್ತಡ ಹೇರಿ ನಮ್ಮ ನಾಡಧ್ವಜಕ್ಕೆ ಅಧಿಕೃತ ಮನ್ನಣೆ ಸಿಗುವಂತೆ ಮಾಡಬೇಕು ಎಂದು ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

Key words: Separate-nadadweaja- Former CM Siddaramaiah –outrage-bjp-Twitter