ಜ.20ರಿಂದ ವಿಧಾನಮಂಡಲ ಜಂಟಿ ಅಧಿವೇಶನ: ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುದಾನ-ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಮಾಹಿತಿ…

ಬೆಂಗಳೂರು,ಡಿ,12,2019(www.justkannada.in): ಜನವರಿ 20 ರಿಂದ 30 ರವರೆಗೆ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.

ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು,  ಸಭೆಯಲ್ಲಿ ಹಲವು ವಿಚಾರಗಳ ಕುರಿತು ಚರ್ಚಿಸಲಾಯಿತು. ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ,. ಜನವರಿ 20 ರಿಂದ 30 ರವರೆಗೆ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು  ತೀರ್ಮಾನಿಸಲಾಗಿದೆ. ಇನ್ನು ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ಶಂಕುಸ್ಥಾಪನೆ ನೆರವೇರಿಸಿದ ಮೆಡಿಕಲ್ ಕಾಲೇಜು ಸ್ಥಾಪನೆಗೆ 525 ಕೋಟಿ ರೂಪಾಯಿ ಅನುದಾನ ನೀಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹಾಗೆಯೇ ಅರ್ಯ ವೈಶ್ಯ ಸಮುದಾಯಕ್ಕೆ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ನೀಡಿಕೆ ನಿರ್ಧಾರ. ಐಟಿಐನ ಅಂತಿಮ ವರ್ಷದ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಲು 16.95 ಕೋಟಿ ಅನುದಾನ ನೀಡುವುದು ಸೇರಿ ಹಲವು ಮಹತ್ವದ ತೀರ್ಮಾನಗಳನ್ನ ಕೈಗೊಳ್ಳಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪ. ಪಂಗಡದ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಡಿಸಿಎಂ ಗೋವಿಂದ ಕಾರಜೋಳ ನೇತೃತ್ವದ ಸಂಪುಟ ಉಪಸಮಿತಿ ರಚನೆಗೆ ನಿರ್ಧಾರ ಮಾಡಲಾಗಿದೆ ಎಂದರು.

Key words: session -Jan. 20-cabinat meeting – Minister –Madhuswamy- information