ಈ ಬಾರಿಯೂ ಅಧಿವೇಶನಕ್ಕೆ ಮಾಧ್ಯಮಗಳ ಕ್ಯಾಮರಾಗಳಿಗೆ ನಿರ್ಬಂಧ- ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟನೆ…

Promotion

ಬೆಂಗಳೂರು,ಫೆ,14,2020(www.justkannada.in):   ಈ ಬಾರಿಯೂ ವಿಧಾನಮಂಡಲ ಅಧಿವೇಶನಕ್ಕೆ ಮಾಧ್ಯಮಗಳ ಕ್ಯಾಮರಾಗಳಿಗೆ ಅವಕಾಶವಿಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ  ಸ್ಪಷ್ಟನೆ ನೀಡಿದ್ದಾರೆ.

ಇಂದು ಈ ಬಗ್ಗೆ ಪ್ರತಿಕ್ರಿಯಿಸಿದ  ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ,  ಈ ಬಾರಿಯೂ ಅಧಿವೇಶನಕ್ಕೆ ಮಾಧ್ಯಮಗಳ ಕ್ಯಾಮರಾಗಳಿಗೆ ನಿಷೇಧ ಹೇರಲಾಗಿದೆ. ಮಾಧ್ಯಮಗಳ ಕ್ಯಾಮರಾಗಳಿಗೆ ಅನುಮತಿ ಇಲ್ಲ. ಈ ಹಿಂದೆ ಪ್ರಾಯೋಗಿಕವಾಗಿ ನಿಷೇಧ ಹೇರಿದ್ದವು. ಈಗ ಸಂಪೂರ್ಣವಾಗಿ ಅನುಸ್ಪಾನ ತರಲಾಗುತ್ತದೆ. ಲೋಕಸಭೆ ಮತ್ತು ರಾಜ್ಯಸಭೆ ಮಾದರಿಯ ವ್ಯವಸ್ಥೆ ಇಲ್ಲೂ ಪಾಲಿಸಲಾಗುತ್ತದೆ ಎಂದು ಹೇಳಿದರು.

ಇನ್ನು ಫೆಬ್ರುವರಿ 17ರಿಂದ 31ರವರಗೆ ವಿಧಾನಮಂಡಲದ ಅಧಿವೇಶನ ನಡೆಯಲಿದೆ. ಮಾರ್ಚ್ 2 ಮತ್ತು 3ರಂದು ಸಂವಿಧಾನದ ಕುರಿತು ಚರ್ಚೆ ನಡೆಯಲಿದೆ. ಮಾರ್ಚ್ 5 ರಂದು ಬಜೆಟ್ ಮಂಡನೆ ಆಗಲಿದೆ. ಅಧಿವೇಶನದಲ್ಲಿ ಒಟ್ಟು 6 ಮಸೂದೆ ಮಂಡನೆ ಆಗಲಿದ್ದು, ಎಲ್ಲಾ ಸದಸ್ಯರು ಅಧಿವೇಶನದ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ  ಸೂಚನೆ ನೀಡಿದರು.

Key words: session -restricted – cameras – media- Speaker- Vishweshwara Hegde kageri