ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗೆ 9 ದಿನಗಳ ಕಾಲ ನ್ಯಾಯಾಂಗ ಬಂಧನ.

Promotion

ಚಿತ್ರದುರ್ಗ,ಸೆಪ್ಟಂಬರ್,5,2022(www.justkannada.in):  ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗಳಿಗೆ ಕೋರ್ಟ್ 9 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ನಾಲ್ಕು ದಿನಗಳ ಪೋಲಿಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ಇಂದು ಮುರುಘಾ ಶ್ರೀಗಳನ್ನ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಚಿತ್ರದುರ್ಗದ 2ನೇ ಹೆಚ್ಚುವರಿ ನ್ಯಾಯಾಲಯ ಸೆಪ್ಟಂಬರ್ 14ರವರೆಗೆ ಮುರುಘಾ ಶ್ರೀಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಇನ್ನು ಜಾಮೀನು ಕೋರಿ ಮುರುಘಾ ಶ್ರೀಗಳು ಅರ್ಜಿ ಸಲ್ಲಿಸಿದ್ದಾರೆ.

Key words: Sexual Harassment –case-  Muruga Sri -judicial custody