ಶಾಲೆಯಲ್ಲೇ ವಿದ್ಯಾರ್ಥಿನಿಗೆ ಮುಖ್ಯ ಶಿಕ್ಷಕನಿಂದ ಲೈಂಗಿಕ ಕಿರುಕುಳ.

ಮೈಸೂರು,ಜನವರಿ,25,2022(www.justkannada.in): ಶಾಲಾ ಮುಖ್ಯ ಶಿಕ್ಷಕನೋರ್ವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.

ಹೆಚ್ ಡಿ ಕೋಟೆ ತಾಲೂಕಿನ ಶಾಲೆಯಲ್ಲೇ  ವಿದ್ಯಾರ್ಥಿನಿಗೆ ಮುಖ್ಯ ಶಿಕ್ಷಕ  ಲೈಂಗಿಕ ಕಿರುಕುಳ ನೀಡುತ್ತಿರುವ ವೀಡಿಯೋ ಮೊಬೈಲ್‌ ನಲ್ಲಿ ಸೆರೆಯಾಗಿದೆ.  ವಿದ್ಯಾರ್ಥಿಗಳೇ ಈ ವಿಡಿಯೋ ರೆಕಾರ್ಡ್ ಮಾಡಿದ್ದು ಸದ್ಯ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಈ ವಿಡಿಯೋ ವೈರಲ್ ಆಗಿದೆ.

ಈ ಸಂಬಂಧ  ಮುಖ್ಯ ಶಿಕ್ಷಕನ ವಿರುದ್ಧ ವಿಡಿಯೋ ಜೊತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದ್ದು, ಬಿಇಓ ಶಾಲೆಗೆ ಭೇಟಿ ನೀಡಿ ಪರಿಶೀಲಿಸುವ ಭರವಸೆ ನೀಡಿದ್ದಾರೆ.

Key words: Sexual harassment – head teacher – school.