ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ವಿಶ್ವಮಾನವ ಕುವೆಂಪು ಹೆಸರು: ಮಾಜಿ ಸಿಎಂ ಯಡಿಯೂರಪ್ಪ

Promotion

ಬೆಂಗಳೂರು, ಫೆಬ್ರವರಿ 12, 2023 (www.justkannada.in): ಶಿವಮೊಗ್ಗ  ವಿಮಾನ ನಿಲ್ದಾಣಕ್ಕೆ ವಿಶ್ವಮಾನವ ಕುವೆಂಪು ಹೆಸರಿಡಲು ನಿರ್ಧಾರ ಮಾಡಲಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ಏರ್ ಪೋರ್ಟ್ ಗೆ ಕುವೆಂಪು ಹೆಸರಿಡುವಂತೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ. ಫೆ.27 ರಂದು ಶಿವಮೊಗ್ಗ ಏರ್ ಪೋರ್ಟ್ ಗೆ ಮೋದಿ ಬರುತ್ತಾರೆ. ಮೋದಿ ಅವರೇ ಕುವೆಂಪು ಹೆಸರನ್ನು ಘೋಷಣೆ ಮಾಡುತ್ತಾರೆ ಎಂದು ಬಿಎಸ್ ವೈ ಶಿವಮೊಗ್ಗದಲ್ಲಿ ತಿಳಿಸಿದ್ದಾರೆ.

ಫೆ.27 ರಂದು ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆಯಾಗಲಿದೆ. ಲೋಕಾರ್ಪಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಫೆಬ್ರವರಿ 27ರಂದು ಜಿಲ್ಲೆಗೆ ಆಗಮಿಸುತ್ತಿರುವ ಸಿದ್ಧತೆಗಳ ಪೂರ್ವಸಿದ್ಧತೆ ನಡೆಸಲಾಗಿದೆ.