ಶಿರಾ ಬೈ ಎಲೆಕ್ಷನ್: ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದ ಡಿಸಿಎಂ ಅಶ್ವಥ್ ನಾರಾಯಣ್…

Promotion

ತುಮಕೂರು,ಅಕ್ಟೋಬರ್,16,2020(www.justkannada.in):  ಆರ್.ಆರ್ ನಗರ ಮತ್ತು ಶಿರಾ ಉಪಚುನಾವಣಾ ಕಣ ರಂಗೇರಿದ್ದು ಈ ನಡುವೆ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಲೇವಡಿ ಮಾಡಿದ್ದಾರೆ.jk-logo-justkannada-logo

ಇಂದು ತುಮಕೂರಿನ ಶಿರಾ ಕ್ಷೇತ್ರದಲ್ಲಿ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಶಿರಾ ಕ್ಷೇತ್ರ ಸಂಪೂರ್ಣ ಕೇಸರಿಮಯವಾಗಿದೆ. ರಾಜ್ಯದಲ್ಲಿ ಸ್ಥಿರ ಸರ್ಕಾರವಿದೆ. ಬಿಜೆಪಿಯನ್ನ ಗೆಲ್ಲಿಸಲು ಜನ ತೀರ್ಮಾನ ಮಾಡಿದ್ದಾರೆ. ಅಭಿವೃದ್ದಿಗಾಗಿ ಜನ ಬಿಜೆಪಿಗೆ ಮತ ಹಾಕಲಿದ್ದಾರೆ. ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದರು.

ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಶಿರಾ ಮತ್ತು ಆರ್ ಆರ್ ನಗರ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ. ಎರಡು ಕ್ಷೇತ್ರದಲ್ಲಿ ಕಮಲ ಅರಳುತ್ತದೆ. ಬಿಜೆಪಿ ವಿಜಯಯಾತ್ರೆ ಮುಂದುವರೆಯುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words:  Shira -by election-DCM -Ashwath Narayan – JDS- not