ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ವಿರುದ್ಧ ಶೋಯಬ್‌ ಅಖ್ತರ್‌ ಆಕ್ರೋಶ

ಲಾಹೋರ್, ಮಾರ್ಚ್ 18, 2020 (www.justkannada.in): ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯು (ಪಿಸಿಬಿ) ವಿರುದ್ಧ ಶೋಯಬ್‌ ಅಖ್ತರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಿಯಾದ ನಿರ್ಧಾರಗಳನ್ನು ಕೈಗೊಳ್ಳದ ಹೊರತು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಆ ದೇಶದ ಮಾಜಿ ಕ್ರಿಕೆಟಿಗ ಶೋಯಬ್‌ ಅಖ್ತರ್‌ ಹೇಳಿದ್ದಾರೆ. ವಿಶ್ವದ ಬೇರೆಬೇರೆ ರಾಷ್ಟ್ರಗಳ ಕ್ರಿಕೆಟ್‌ ಮಂಡಳಿಗಳ ಬಗ್ಗೆ ಮಾತನಾಡಿರುವ ಅವರು, ಪಿಸಿಬಿಯಲ್ಲಿ ತಮಗೂ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸೌರವ್‌ ಗಂಗೂಲಿ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷರಾಗಿದ್ದಾರೆ. ರಾಹುಲ್‌ ದ್ರಾವಿಡ್‌ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥರಾಗಿದ್ದಾರೆ.

ಗ್ರೇಮ್‌ ಸ್ಮಿತ್‌ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಮಂಡಳಿಯ (ಸಿಎಸ್‌ಎ) ಅಧ್ಯಕ್ಷರಾಗಿದ್ದಾರೆ. ಮಾರ್ಕ್‌ ಬೌಚರ್‌ ಅಲ್ಲಿನ ತಂಡದ ಮುಖ್ಯ ಕೋಚ್‌ ಆಗಿದ್ದಾರೆ. ಆದರೆ, ಪಾಕಿಸ್ತಾನದಲ್ಲಿ ಎಲ್ಲವೂ ತದ್ವಿರುದ್ಧ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.