‘ಕೈಗೆ ಬಳೆ ಹಾಕಿಕೊಳ್ಳಿ’ ಎಂದು ಹೇಳಿಕೆ ನೀಡಿದ್ದ ಸಂಸದೆ ಶೋಭಾ ಕರಂದ್ಲಾಜೆಗೆ ಟ್ವಿಟ್ಟರ್ ನಲ್ಲೆ ತಿರುಗೇಟು ಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯ…

Promotion

ಬೆಂಗಳೂರು, ಮೇ 16,2019(www.justkannada.in): “ನಿಮ್ಮ ಪಕ್ಷದ ಶಾಸಕರನ್ನು ಹಿಂಡಿದಿಟ್ಟುಕೊಳ್ಳುವುದು ನಿಮ್ಮ ಕೆಲಸ. ಅದು ಆಗದಿದ್ದರೇ ಕೈಗೆ ಬಳೆ ಹಾಕಿಕೊಳ್ಳಿ ಎಂದು ಹೇಳಿಕೆ ನೀಡಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ.

“ಕುಮಾರಿ ಶೋಭಾ ಕರಂದ್ಲಾಜೆ ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ,ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೆ ಸಾಧನೆಯ ಉತ್ತುಂಗಕ್ಕೇರಿದವರು” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಟಾಂಗ್ ನೀಡಿದ್ದಾರೆ. .

“ನಿಮ್ಮ ಪಕ್ಷದ ಶಾಸಕರನ್ನು ಹಿಂಡಿದಿಟ್ಟುಕೊಳ್ಳುವುದು ನಿಮ್ಮ ಕೆಲಸ. ಆ ಕೆಲಸ ಮಾಡಲು ನಿಮಗೆ ಸಾಧ್ಯವಾಗದಿದ್ದರೆ ಕೈಗೆ ಬಳೆ ಹಾಕಿಕೊಳ್ಳಿ”. ಸಿದ್ದರಾಮಯ್ಯ ಬಲಹೀನರು ಎಂದು, ಸಂಸದೆ ಶೋಭಾ ಕರಂದ್ಲಾಜೆ ನೀಡಿದ ಹೇಳಿಕೆ ನೀಡಿದ್ದರು.

Key words: Shobha Karandlaje- former CM-  Siddaramaiah- Twitter –tong