ವೈದ್ಯರ ಕೊರತೆ ನೀಗಿಸಲು ಕ್ರಮ- ಕೊಡಗಿನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಹೇಳಿಕೆ….

Promotion

ಕೊಡಗು,ಸೆ,27,2019(www.justkannada.in):  ವೈದ್ಯರ ಮತ್ತು ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.

ಕೊಡಗಿನಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು, ವೈದ್ಯರ ಕೊರತೆ  ನೀಗಿಸುವ ಕುರಿತು ತಕ್ಷಣ ಸಿಎಂ ಬಿಎಸ್ ಯಡಿಯೂರಪ್ಪ ಗಮನಕ್ಕೆ ತರುತ್ತೇನೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬಗ್ಗೆ ಯೂ ತಿಳಿಸುತ್ತೇನೆ ಎಂದರು.

ಹಾಗೆಯೇ ಕೊಡಗು ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಅಗತ್ಯವಿದೆ. ಕೊಡಗು ಜಿಲ್ಲಾಸ್ಪತ್ರೆಯಲ್ಲಿನ ಸಮಸ್ಯೆಗಳನ್ನ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಶ್ರೀರಾಮುಲು ತಿಳಿಸಿದರು.

Key words: shortage-doctors- Statement – Health Minister- Sriramulu – Kodagu