ರಾಜ್ಯ ಸುತ್ತಿ ಕಾಂಗ್ರೆಸ್ ನಿಜಬಣ್ಣ ತೋರಿಸುತ್ತೇನೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

Promotion

ಬೆಂಗಳೂರು,ಆಗಸ್ಟ್,15,2022(www.justkannada.in): ಕಾಂಗ್ರೆಸ್  ನಲ್ಲಿ ಸಿಎಂ ಸ್ಥಾನಕ್ಕಾಗಿ ಬಡಿದಾಡಿಕೊಳ್ಳುತ್ತಿದ್ದಾರೆ. ರಾಜ್ಯ ಸುತ್ತಿ ಕಾಂಗ್ರೆಸ್ ನಿಜಬಣ್ಣ ತೋರಿಸುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.

ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ ವೈ,  ಮುಂದಿನ ಬಾರಿ ಬಿಜೆಪಿ ಪೂರ್ಣಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ.  ಕಾಂಗ್ರೆಸ್ ಸಿಎಂ ಸ್ಥಾನಕ್ಕಾಗಿ ಬಡಿದಾಡಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕೆ ಬಂದಿಬಿಟ್ಟೇವು ಎಂದು ಬಡಿದಾಡಿಕೊಳ್ಳುತ್ತಿದ್ದಾರೆ.

ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳು ಆರ್ಥಿಕವಾಗಿ ಸದೃಢವಾಗಿವೆ . ಸಾಮೂಹಿಕ ನಾಯಕತ್ವದಲ್ಲಿ ಸಾಮೂಹಿಕ ಚುನಾವಣೆ ಎದರಿಸುತ್ತೇವೆ.  ಸರ್ವರಿಗೂ ಸಮಪಾಲು  ಸರ್ವರಿಗೂ ಸಮಬಾಳು  ಎಂಬುದು ನಮ್ಮ ಸಿದ್ಧಾಂತವಾಗಿದೆ  ಎಂದರು.

Key words: show – true colors – Congress-Former CM -BS Yeddyurappa.