ಟೆಸ್ಟ್ ಕ್ರಿಕೆಟ್: ಚೊಚ್ಚಲ ಪಂದ್ಯದಲ್ಲೇ ಶತಕ ಗಳಿಸಿದ ಶ್ರೇಯಸ್ ಅಯ್ಯರ್

Promotion

ಬೆಂಗಳೂರು, ನವೆಂಬರ್ 26, 2021 (www.justkannada.in): ಪದಾರ್ಪಣೆ ಪಂದ್ಯದಲ್ಲೇ ಶ್ರೇಯಸ್ ಅಯ್ಯರ್ ಶತಕ ಸಿಡಿಸಿ ಸಾಧನೆ ಮಾಡಿದ್ದಾರೆ.

ಕಾನ್ಪುರದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಪರ ಪದಾರ್ಪಣೆ ಪಂದ್ಯದಲ್ಲೇ ಶ್ರೇಯಸ್ ಅಯ್ಯರ್ ಶತಕ ಗಳಿಸಿದ್ದಾರೆ. ಈ ಮೂಲಕ ಚೊಚ್ಚಲ ಪಂದ್ಯದಲ್ಲೇ ಸೆಂಚುರಿ ಬಾರಿಸಿದ ಭಾರತದ 16ನೇ ಆಟಗಾರ ಅಯ್ಯರ್ ಆಗಿದ್ದಾರೆ.

ವಿರಾಟ್ ಕೊಹ್ಲಿ ಜಾಗದಲ್ಲಿ ಸ್ಥಾನ ಪಡೆದಿರುವ ಅಯ್ಯರ್ ಮೊದಲ ಪಂದ್ಯದಲ್ಲೇ ಭರವಸೆ ಮೂಡಿಸಿದ್ದಾರೆ. ಮೊದಲ ದಿನದಾಟದ ಅಂತ್ಯದ ವೇಳೆಗೆ ಅಜೇಯ 75 ರನ್ ಗಳಿಸಿದ್ದ ಅಯ್ಯರ್, ಎರಡನೇ ದಿನ ಉತ್ತಮವಾಗಿ ಆರಂಭಿಸಿದರು. 157 ಎಸೆತಗಳಲ್ಲಿ 12 ಬೌಂಡರಿ, 2 ಸಿಕ್ಸರ್ ಸಿಡಿಸಿ ಅಯ್ಯರ್ ಶತಕ ಪೂರ್ಣಗೊಳಿಸಿದರು.

ಈ ಮೂಲಕ ಚೊಚ್ಚಲ ಪಂದ್ಯದಲ್ಲಿ ಶತಕ ಸಿಡಿಸಿದ ಮೂರನೇ ಹಿರಿಯ ಆಟಗಾರ ಎನಿಸಿಕೊಂಡರು. ಜೊತೆಗೆ ಡೆಬ್ಯೂ ಪಂದ್ಯದಲ್ಲಿ ವೇಗವಾಗಿ 100 ರನ್ ಗಳಿಸಿದ ನಾಲ್ಕನೇ ಪ್ಲೇಯರ್ ಎಂಬ ಸಾಧನೆ ಮಾಡಿದ್ದಾರೆ.