ಸ್ನಾನಕ್ಕೆಂದು ಕಾವೇರಿ ನದಿಗೆ ಇಳಿದಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು…

ಮಂಡ್ಯ,ಫೆ,14,2020(www.justkannada.in): ಕಾವೇರಿ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಶಂಬುಲಿಂಗಯ್ಯನ ಕಟ್ಟೆ ಬಳಿ ಕಾವೇರಿ ನದಿಯಲ್ಲಿ ಈ ಘಟನೆ ನಡೆದಿದೆ. ಇಫ್ತಿಕಾರ್(18) ಮುದಾಕಮ್(18), ತೌಫಿಕ್(19) ಮೃತಪಟ್ಟವರು ಎಂದು ಗುರುತಿಸಲಾಗಿದೆ ಮೂವರು ವಿದ್ಯಾರ್ಥಿಗಳು ಸ್ನಾನ್ನಕೆಂದು ಕಾವೇರಿ ನದಿಗೆ ಇಳಿದಿದ್ದರು ಈ ವೇಳೆ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಸದ್ಯ ಓರ್ವ ವಿದ್ಯಾರ್ಥಿಯ ಶವ ಪತ್ತೆಯಾಗಿದ್ದು, ಮತ್ತಿಬ್ಬರ ವಿದ್ಯಾರ್ಥಿಗಳ ಮೃತದೇಹ ಪತ್ತೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ.  ಈ ಕುರಿತು ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  shrirangapatna-three student- death- mater- Bath