ಸಿದ್ದರಾಮಯ್ಯ ಮತ್ತೆ ಸಿಎಂ ಆದ್ರೆ ಒಳ್ಳೆಯದು- ‘ಕೈ’ ಶಾಸಕ ಕೆ.ಸುಧಾಕರ್…

Promotion

ಕೋಲಾರ, ಮೇ 6,2019(www.justkannada.in):  ಮಾಜಿ  ಸಿಎಂ ಸಿದ್ದರಾಮಯ್ಯ ಅವರೇ ಮತ್ತೆ ಮುಖ್ಯಮಂತ್ರಿ ಆದರೆ ಒಳ್ಳೆಯದು ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಕೆ. ಸುಧಾಕರ್ ಹೇಳಿದ್ದಾರೆ.

ಕೋಲಾರದಲ್ಲಿ ಇಂದು ಮಾತನಾಡಿದ ಶಾಸಕ ಸುಧಾಕರ್ ,  ರಾಜ್ಯದಲ್ಲಿ ಒಳ್ಳೆಯ ಸರ್ಕಾರವಿದ್ದರೇ ಒಳ್ಳೆಯದು. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಂತೆ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾರೆ. ಕುಮಾರಸ್ವಾಮಿ ಅವರ ನಾಯಕತ್ವದಲ್ಲಿಯೇ ನಾವೆಲ್ಲ ಹೋಗುತ್ತಿದ್ದೇವೆ. ಹೈಕಮಾಂಡ್ ಸಿಎಂ ಬದಲಾಯಿಸಿದರೆ ನಾವು ಅದಕ್ಕೆ ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರಲ್ಲಿ ಅತೃಪ್ತಿ ಇರುವುದು ನಿಜ. ರಾಜ್ಯದ ಕೆಲವೆಡೆ ಮೈತ್ರಿಧರ್ಮ ಪಾಲನೆಯಾಗಿಲ್ಲ. ಇದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ನ ಮತಗಳು ಬಿಜೆಪಿ ಪಾಲಾಗಿವೆ. ಎಂದು ಕೆ. ಸುಧಾಕರ್  ಹೇಳಿದರು.

Key words: Siddaramaiah -again –CM- good a-MLA- K Sudhakar.