ಕಾಂಗ್ರೆಸ್ ಅವಧಿಯಲ್ಲಿ ಕೆರೆ ಒತ್ತುವರಿ ಎಂಬ ಬಿಜೆಪಿ ಆರೋಪಕ್ಕೆ ಸಿದ್ಧರಾಮಯ್ಯ ತಿರುಗೇಟು.

Promotion

ಬೆಂಗಳೂರು,ಸೆಪ್ಟಂಬರ್,20,2022(www.justkannada.in): ಕಾಂಗ್ರೆಸ್ ಅವಧಿಯಲ್ಲಿ ಕೆರೆ ಒತ್ತುವರಿಯಾಗಿದೆ ಎಂದು ಆರೋಪಿಸಿರುವ ಬಿಜೆಪಿಗೆ  ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಿದ್ಧರಾಮಯ್ಯ, ನಮ್ಮ ಅವಧಿಯಲ್ಲಿ ಕೆರೆ ಒತ್ತುವರಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.   ಕೆರೆ ಒತ್ತುವರಿ ಬಗ್ಗೆ ದಾಖಲೆ ಕೊಟ್ಟು ಮಾತನಾಡಲಿ. ಸುಮ್ಮನೆ ಆರೋಪ ಮಾಡುತ್ತಾರೆ ಎಂದು ಕಿಡಿಕಾರಿದರು.

ಹಾಗೆಯೇ ಕಾಂಗ್ರೆಸ್ ಅವಧಿಯಲ್ಲೂ ಪಿಎಸ್ ಐ ಅಕ್ರಮ ನಡೆದಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ,  ಎಲ್ಲಾ ಅವಧಿಯಲ್ಲಿನ ಅಕ್ರಮಗಳ ಬಗ್ಗೆ ತನಿಖೆ ನಡೆಸಿ. ಎಲ್ಲವನ್ನೂ ಸೇರಿಸಿ ತನಿಖೆ ನಡೆಸಲಿ ಎಂದು ಸವಾಲು ಹಾಕಿದರು.

Key words: Siddaramaiah– BJP- allegation -lake -encroachment – Congress