ಪೇ ಸಿಎಂ ಅಭಿಯಾನದ ವಿರುದ್ಧ ಕಾನೂನು ಕ್ರಮ ಎಂದ ಸಿಎಂ ಬೊಮ್ಮಾಯಿಗೆ ತಿರುಗೇಟು ನೀಡಿದ ಸಿದ್ಧರಾಮಯ್ಯ.

Promotion

ಚಿಕ್ಕಬಳ್ಳಾಪುರ,ಸೆಪ್ಟಂಬರ್,24,2022(www.justkannada.in): ಕಾಂಗ್ರೆಸ್ ನಡೆಸುತ್ತಿರುವ ಪೇ ಸಿಎಂ ಅಭಿಯಾನದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿಕೆ ನೀಡಿದ್ಧ ಸಿಎಂ ಬಸವರಾಜ ಬೊಮ್ಮಾಯಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾನು ಕಾನೂನು ಓದಿದ್ದೇನೆ.  ಸಿಎಂ ಬಸವರಾಜ ಬೊಮ್ಮಾಯಿ ಕಾನೂನು ಓದಿಲ್ಲ, ಕಾನೂನೂ ಕ್ರಮಕ್ಕೆ ಮುಂದಾದ್ರೆ ನಾವು ಸುಮ್ಮನಿರ್ತೀವಾ..?

ಪ್ರತಿಭಟನೆ, ಚಳವಳಿ ಸ್ವಾತಂತ್ರ್ಯ  ಕಿತ್ತು ಕೊಳ್ಳಲು ಆಗಲ್ಲ. ಹೀಗಾಗಿ ಪೇ ಸಿಎಂ ಅಭಿಯಾನದ ವಿರುದ್ಧ ಕ್ರಮ ಕೈಗೊಳ್ಳಲು ಆಗಲ್ಲ ಎಂದು ಸಿದ್ಧರಾಮಯ್ಯ ಟಾಂಗ್ ನೀಡಿದರು.

Key words: Siddaramaiah – CM Bommai – legal action –against- Pay CM- campaign.