ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಿದ್ದರಾಮಯ್ಯ, ಡಿಕೆಶಿ: ಒಗ್ಗಟ್ಟು ಪ್ರದರ್ಶನ .

Promotion

ನವದೆಹಲಿ,ಮೇ,18,2023(www.justkannada.in):  ಸಿಎಂ ಹುದ್ದೆಗಾಗಿ ಪೈಪೋಟಿ ನಡೆಸಿದ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ಕಾಂಗ್ರೆಸ್ ಹೈಕಮಾಂಡ್ ನ ಸರ್ವಾನುಮತದ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದ್ದು ಇಂದು ಇಬ್ಬರು ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿದ್ದಾರೆ.

ನವದೆಹಲಿ ರಾಜಾಜಿ ಮಾರ್ಗ್ 10ರಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಒಟ್ಟಿಗೆ ಡಿ.ಕೆ ಶಿವಕುಮಾರ್ ಹಾಗೂ ಸಿದ್ಧರಾಮಯ್ಯ ಭೇಟಿ ನೀಡುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಸಿದ್ಧರಾಮಯ್ಯ ಸಿಎಂ ಮತ್ತು ಡಿ.ಕೆ ಶಿವಕುಮಾರ್ ಡಿಸಿಎಂ ಎಂಬ ನಿರ್ಣಯವನ್ನ ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿದ್ದು ಇಂದು ಸಂಜೆ ನಡಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಇದು ಘೋಷಣೆಯಾಗಲಿದೆ ಎನ್ನಲಾಗಿದೆ.

ಕೆಲವೇ ಕ್ಷಣಗಳಲ್ಲಿ ಎಐಸಿಸಿ ವತಿಯಿಂದ ಸುದ್ಧಿಗೋಷ್ಠಿ ನಡೆಯಲಿದೆ.

Key words: Siddaramaiah –DK Shivakumar-met -AICC President -Mallikarjuna Kharge