ಸರ್ಕಾರ ಬೀಳುತ್ತೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್: ಬೇರೆ ಯಾವುದೇ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದ ಸಿಎಂ ಬಿಎಸ್ ಯಡಿಯೂರಪ್ಪ…

Promotion

ಬೆಳಗಾವಿ,ನ,23,2019(www.justkannada.in):  ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್ ಸಿಪಿ ಸರ್ಕಾರ ರಚನೆ ಕುರಿತು ಸಂತಸ ವ್ಯಕ್ತಪಡಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಬೇರೆ ಯಾವುದೇ ಪಕ್ಷಗಳಿಗೆ ಭವಿಷ್ಯ ಇಲ್ಲ.  ಇದು ಉಳಿದ ಪಕ್ಷಗಳಿಗೆ ಮನವರಿಕೆಯಾಗಿದೆ ಎಂದು  ತಿಳಿಸಿದ್ದಾರೆ.

ಬೆಳಗಾವಿಯ ಅಥಣಿಯಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಜನ ಇವತು ಮೋದಿ ಮತ್ತು ಬಿಜೆಪಿ ಜತೆ ಇದ್ದಾರೆ. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನಾವಿಸ್ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಪಚುನಾವಣೆ ಬಳಿಕ ಸರ್ಕಾರ ಬೀಳುತ್ತೆ  ಎಂಬ ಸಿದ್ಧರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ,  15 ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ.  ಕಾಂಗ್ರೆಸ್ ಗೆ ಜನತೆ ತಕ್ಕ ಪಾಠ ಕಲಿಸುತ್ತಾರೆ. ಸಿದ್ಧರಾಮಯ್ಯ ಯೋಗ್ಯತೆಗೆ ಲೋಕಸಭೆ ಚುನಾವಣೆಯಲ್ಲಿ 1 ಸ್ಥಾನ ಗೆದ್ದರು. ಅವರ ಯೋಗ್ಯತೇ ಇಷ್ಟೆ ಎಂದು ಲೇವಡಿ ಮಾಡಿದರು.

Key words: Siddaramaiah- government  -CM BS Yeddyurappa – other party –no future.