ಡಿಕೆಶಿ ಭೇಟಿ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

Promotion

ಬೆಂಗಳೂರು, ಅಕ್ಟೋಬರ್ 27, 2019 (www.justkannada.in): ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಂದು ಕಾಂಗ್ರೆಸ್‍ನ ಪ್ರಮುಖ ನಾಯಕರು, ಸಾವಿರಾರು ಕಾರ್ಯಕರ್ತರು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಜೆಡಿಎಸ್‍ನ ದಾಸರಹಳ್ಳಿಕ್ಷೇತ್ರದ ಮಂಜುನಾಥ್, ಮಾಜಿ ಶಾಸಕ ಆರ್.ವಿ.ದೇವರಾಜ್ ಸೇರಿದಂತೆ ಅನೇಕ ಗಣ್ಯರು ಡಿ.ಕೆ.ಶಿವಕುಮಾರ್ ಅವರ ಮನೆಗೆ ಆಗಮಿಸಿ ಕುಶಲೋಪರಿ ವಿಚಾರಿಸಿದರು.

57 ದಿನಗಳ ನಂತರ ಮನೆಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ಹಾಗೂ ಮಾತನಾಡಿಸಲು ಜನ ಮುಗಿ ಬೀಳುತ್ತಿದ್ದರು. ಒಂದಷ್ಟು ಮಂದಿ ಹಾರ ತುರಾಯಿ, ಶಾಲು ಹಾಕಿ ತಮ್ಮ ಪ್ರೀತಿ ವ್ಯಕ್ತಪಡಿಸಿದರು.