ನವೀನ್ ಮೃತದೇಹ ತರಿಸುವ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆಯುವೆ- ಮಾಜಿ ಸಿಎಂ ಸಿದ‍್ಧರಾಮಯ್ಯ.

Promotion

ಹಾವೇರಿ,ಮಾರ್ಚ್,9,2022(www.justkannada.in): ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಮೃತಪಟ್ಟ ಕನ್ನಡಿಗ ನವೀನ್ ಮೃತದೇಹ ತರಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯುತ್ತೇನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದರು.

ಉಕ್ರೇನ್ ನಲ್ಲಿ ಮೃತಪಟ್ಟ ಕನ್ನಡಿಗ ನವೀನ್ ಅವರ ನಿವಾಸಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಭೇಟಿ ನೀಡಿದರು. ಹಾವೇರಿಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನಿವಾಸದಲ್ಲಿ ನವೀನ್ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾಜಿ ಸ್ಪೀಕರ್ ಕೋಳಿವಾಡ, ಮಾಜಿ ಸಚಿವ ರುದ್ರಪ್ಪ ಲಮಾಣಿ, ಜಯಮಾಲಾ  ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಸಿದ‍್ಧರಾಮಯ್ಯ, ನವೀನ್ ಸಾವು ತುಂಬಾ ನೋವುಂಟು ಮಾಡಿದೆ.  ಮಗನ ಓದಿನ ಬಗ್ಗೆ  ತಂದೆ ತಾಯಿ ದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದರು. ದುರಾದೃಷ್ಟವಶಾತ್ ನವೀನ್ ಓದು ಮುಗಿಸಲಿಲ್ಲ. ನವೀನ್ ತಂದೆ ತಾಯಿ ತುಂಬಾ ನೋವಿನಲ್ಲಿದ್ದಾರೆ ಎಂದರು.

ಕೇಂದ್ರ ಸರ್ಕಾರ ಮೃತದೇಹ ತರುವ ಪ್ರಯತ್ನ ಮಾಡಬೇಕು. ಈ ಸಂಬಂಧ  ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇನೆ ಎಂದು ಸಿದ್ಧರಾಮಯ್ಯ ತಿಳಿಸಿದರು.

Key words: siddaramaiah-visit-naveen-residence