ಸೈಮಾ ಪ್ರಶಸ್ತಿ: ಅತೀ ಹೆಚ್ಚು ವಿಭಾಗಗಳಲ್ಲಿ ಚಾಲೆಂಜಿಂಗ್ ಸ್ಟಾರ್ ‘ರಾಬರ್ಟ್’ ನಾಮಿನೇಟ್

Promotion

ಬೆಂಗಳೂರು, ಸೆಪ್ಟೆಂಬರ್ 11, 2022 (www.justkannada.in): ಈ ಬಾರಿಯ ಸೈಮಾ ಪ್ರಶಸ್ತಿಯಲ್ಲಿ ಕನ್ನಡದ ಪರ ರಾಬರ್ಟ್ 10 ವಿಭಾಗಗಳಲ್ಲಿ ನಾಮಿನೇಟ್ ಆಗಿ ಅತಿ ಹೆಚ್ಚು ವಿಭಾಗಗಳಲ್ಲಿ ನಾಮಿನೇಟ್ ಆದ ಸ್ಯಾಂಡಲ್ ವುಡ್ ಸಿನಿಮಾ ಎನಿಸಿಕೊಂಡಿದೆ.

ರಾಜ್ ಬಿ ಶೆಟ್ಟಿ ನಿರ್ದೇಶನದ ಸೂಪರ್ ಹಿಟ್ ಚಿತ್ರ ಗರುಡಗಮನ ವೃಷಭವಾಹನ 8 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಚಿತ್ರ 7 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು.

ಈ 3 ಚಿತ್ರಗಳ ನಡುವೆ ಈ ಬಾರಿಯ ಸೈಮಾ ಪ್ರಶಸ್ತಿ ಕಾರ್ಯಕ್ರಮದಲ್ಲಿ ಜಿದ್ದಾಜಿದ್ದಿ ಏರ್ಪಡಲಿದ್ದು, ಯಾವ ಚಿತ್ರ ಹೆಚ್ಚು ಪ್ರಶಸ್ತಿಗಳನ್ನು ತನ್ನ ಚೀಲಕ್ಕೆ ಹಾಕಿಕೊಳ್ಳಲಿದೆ ಎಂಬ ಕುತೂಹಲ ಮೂಡಿತ್ತು.

ಸದ್ಯ ಪ್ರಶಸ್ತಿ ವಿತರಣೆ ಆರಂಭವಾಗಿದ್ದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಈ ಬಾರಿಯ ಸೈಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಕನ್ನಡದ ಪರ ಮೊದಲನೇ ಪ್ರಶಸ್ತಿಯನ್ನು ಬಾಚಿಕೊಳ್ಳುವುದರ ಮೂಲಕ ಖಾತೆಯನ್ನು ತೆರೆದಿದೆ.

ರಾಬರ್ಟ್ ಚಿತ್ರದ ಛಾಯಾಗ್ರಾಹಕ ಸುಧಾಕರ್ ರಾಜ್ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ಗೆದ್ದಿದ್ದಾರೆ.  ನಿನ್ನ ಸನಿಹಕೆ ಚಿತ್ರದ ನೀ ಪರಿಚಯ ಹಾಡನ್ನು ಬರೆದಿದ್ದ ಗಾಯಕ ವಾಸುಕಿ ವೈಭವ್’ಗೆ ಕನ್ನಡ ವಿಭಾಗದ ಅತ್ಯುತ್ತಮ ಗೀತರಚನೆಕಾರ ಪ್ರಶಸ್ತಿ ಸಿಕ್ಕಿದೆ.