ಸರ್.ಎಂ ವಿಶ್ವೇಶ್ವರಯ್ಯ ಮತ್ತೊಮ್ಮೆ ಹುಟ್ಟಿ ಬರಲಿ- ಸಿಎಂ ಬಸವರಾಜ ಬೊಮ್ಮಾಯಿ .

Promotion

ಬೆಂಗಳೂರು,ಆಗಸ್ಟ್,18,2021(www.justkannada.in): ರಾಜ್ಯಕ್ಕೆ ಮತ್ತೊಬ್ಬ ವಿಶ್ವೇಶ್ವರಯ್ಯನವರ ಅವಶ್ಯಕತೆ ಇದೆ. ಸರ್.ಎಂ ವಿಶ್ವೇಶ್ವರಯ್ಯ ಮತ್ತೊಮ್ಮೆ ಹುಟ್ಟಿ ಬರಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ನುಡಿದಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.  ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಇದನ್ನು ಹೇಳುತ್ತಿದ್ದೇನೆ. ರಾಜ್ಯವನ್ನು ಅಭಿವೃದ್ಧಿಯತ್ತ ಮುನ್ನಡೆಸಲು ವಿಶ್ವೇಶ್ವರಯ್ಯನವರ ಅವಶ್ಯಕತೆ ಇದೆ. ವಿಶ್ವೇಶ್ವರಯ್ಯ ಮತ್ತೊಮ್ಮೆ ಹುಟ್ಟಿ ಬರಲಿ. ನಮ್ಮಲೇ ಇರುವ ವಿಶ್ವೇಶ್ವರಯ್ಯನವರನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಸಿದ್ಧ ಇದೆ ಎಂದು ಹೇಳಿದರು.

ಇಂದು ವಿಧಾನಸೌಧದಲ್ಲಿ ನಡೆದ ಸರ್. ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ರಾಜ್ಯಪಾಲರಾದ ಟಿ.ಸಿ. ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ. ಮೋಹನ್ ಉಪಸ್ಥಿತರಿದ್ದರು.

 

Key words: Sir M Vishweshwaraiah – born –again- CM- Basavaraja Bommai