ನಟಿ ಅನುಷ್ಕಾ ಶೆಟ್ಟಿ ಸಹೋದರನ ಹತ್ಯೆಗೆ ಸಂಚು: ಗೃಹ ಸಚಿವರಿಗೆ ದೂರು

Promotion

ಬೆಂಗಳೂರು, ಜೂನ್ 12, 2022 (www.justkannada.in): ನಟಿ ಅನುಷ್ಕಾ ಶೆಟ್ಟಿ ಸಹೋದರ, ಜಯ ಕರ್ನಾಟಕ ಸಂಘಟನೆಯ ಗುಣರಂಜನ್‌ ಶೆಟ್ಟಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಗೃಹ ಸಚಿವರಿಗೆ ದೂರು ಬಂದಿದೆ.

ಈ ಸಂಬಂಧ ಜಯ ಕರ್ನಾಟಕ ಸಂಘಟನೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವ್ರಿಗೆ ದೂರು ಸಲ್ಲಿಸಿದೆ.

ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಸಹೋದರ, ಜಯ ಕರ್ನಾಟಕ ಸಂಘಟನೆಯ ಗುಣರಂಜನ್‌ ಶೆಟ್ಟಿ ಹತ್ಯೆಗೆ ಸಂಚು ರೂಪಿಸಲಾಗಿದೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಚಿವರಿಗೆ ಮನವಿ ಸಲ್ಲಿಸಲಾಗಿದೆ.

ಇನ್ನು ದಿವಂಗತ ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಮತ್ತೆ ಜಿದ್ದು ಶುರುವಾಗಿದ್ಯಾ ಎಂಬ ಅನುಮಾನ ಶುರುವಾಗಿದೆ. ಗುಣರಂಜನ್‌ ಶೆಟ್ಟಿ ಹತ್ಯೆಗೆ ಆಪ್ತರೇ ಸಂಚು ರೂಪಿಸಿದ್ದಾರಾ ಎಂಬ ಅನುಮಾನ ಮೂಡಿದೆ.