ಬೆಂಗಳೂರು, ಜನವರಿ 10,2024(www.justkannada.in): ಯುವ ನಿಧಿ ಯೋಜನೆಗೆ ನೋಂದಾಯಿಸಿಕೊಂಡವರಿಗೆ ಕೌಶಲ್ಯ ತರಬೇತಿ ನೀಡಲು ಸರ್ಕಾರ ಚಿಂತಿಸಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಶರಣಪ್ರಕಾಶ್ ಪಾಟೀಲ್ಮ ಕೌಶಲ್ಯವಂತರಾಗಿ ಅವರು ಉದ್ಯೋಗದಲ್ಲಿ ತೊಡಗಿಸಿಕೊಂಡರೇ, ಅವರಿಗೆ ನಾವು ಮಾಸಿಕ ಹಣ ನೀಡಬೇಕಾಗುವುದಿಲ್ಲ. ಈ ಯುವಕರಿಗೆ ಉದ್ಯೋಗ ತರಬೇತಿ ನೀಡಲು ಮುಂದೆ ಬರುವ ಕಂಪನಿಗಳತ್ತ ನಾವು ಗಮನ ಹರಿಸಿದ್ದೇವೆ. ಈ ಸಂಬಂಧ ಹೊಸ ಯೋಜನೆಯನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ತರಬೇತಿ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಪೈಕಿ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ನೋಂದಣಿಯಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾದವರಿಗೆ ಮಾಸಿಕ 1,500 ರೂಪಾಯಿಗಳನ್ನು ಸರ್ಕಾರ ನೀಡಲಿದೆ.
Key words: Skill training – youth- fund -enrollees-Minister- Sharan Prakash Patil