ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಂಕಷ್ಟ: ಕೇಂದ್ರದಂತೆ ರಾಜ್ಯದಲ್ಲೂ ವಿನಾಯಿತಿಗೆ ಕ್ರಮ ಕೈಗೊಳ್ಳಿ- ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿಕೆ ಸಲಹೆ…

ಬೆಂಗಳೂರು,ಜು,17,2020(www.justkannada.in): ರಾಜ್ಯದಲ್ಲಿ ಕೊರೋನಾ ಮತ್ತು ಲಾಕ್ ಡೌನ್ ನಿಂದಾಗಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿದ್ದು ಇವುಗಳ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.small-medium-industries-exempt-former-cm-hd-kumaraswamy-advice-government

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕೊರೋನಾ ಸೋಂಕು ಹಬ್ಬಿದ ನಂತರ ಲಾಕ್ ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. ಎಂಎಸ್ ಎಂಇಗಳು ಕೇಂದ್ರದ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ. ಆದರೆ ರಾಜ್ಯ ಸರ್ಕಾರದಲ್ಲಿ ಮಾತ್ರ ಇಂತಹ ವಿನಾಯಿತಿ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ.small-medium-industries-exempt-former-cm-hd-kumaraswamy-advice-government

ಹೀಗಾಗಿ ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಸಣ್ಣ ಮಧ್ಯಮ ಕೈಗಾರಿಕೆಗಳಿಗೆ ಕೇಂದ್ರದಂತೆ ರಾಜ್ಯದಲ್ಲೂ ವಿನಾಯಿತಿಗೆ ಕ್ರಮ ಕೈಗೊಳ್ಳಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Key words: Small – Medium –Industries-exempt -Former CM HD kumaraswamy- Advice – Government.