ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಸ್ವೀಕಾರ- ಸಿಎಂ ಸಿದ್ದರಾಮಯ್ಯ.

ಬೆಂಗಳೂರು, ಜೂನ್‌,7,2023(www.justkannada.in):  ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಕರ್ನಾಟಕ ಶೋಷಿತ ವರ್ಗಗಳ ಮಹಾಒಕ್ಕೂಟದ ನಿಯೋಗವನ್ನು ಭೇಟಿ ಮಾಡಿ ಮಾತನಾಡಿದರು.

ಜಾತಿವಾರು ಸಮೀಕ್ಷೆಯಿಂದ ಜನರಿಗೆ ಒದಗಿಸಬೇಕಾದ ಸೌಲಭ್ಯಗಳು, (preferential treatment) ಮೊದಲಾದ ಅಂಶಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಅಗತ್ಯವಿರುವ ದತ್ತಾಂಶ ಲಭ್ಯವಾಗುವುದು. ಮೀಸಲಾತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ವೈಜ್ಞಾನಿಕ ಹಾಗೂ ನಿಖರ ಮಾಹಿತಿ ಅತಿ ಅಗತ್ಯ. ಈ ಉದ್ದೇಶದಿಂದ ಜಾತಿವಾರು ಸಮೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ವರದಿಯನ್ನು ಸ್ವೀಕರಿಸಿ, ಅದರಲ್ಲಿನ ದತ್ತಾಂಶಗಳ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡಲಾಗುವುದು. ಇಲ್ಲವಾದರೆ ಯಾರಿಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗದು ಎಂದು  ಸಿಎಂ ಸಿದ್ಧರಾಮಯ್ಯ ಅಭಿಪ್ರಾಯಪಟ್ಟರು.

ಒಕ್ಕೂಟದ ಮುಖಂಡರಾದ ಕೆ.ಎಂ.ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಮಾವಳ್ಳಿ ಶಂಕರ್, ಪ್ರೊ.ರವಿ ವರ್ಮಕುಮಾರ್, ಅನಂತ್ ನಾಯಕ್, ಡಾ.ನರಸಿಂಹಯ್ಯ, ಪ್ರೊ.ಜಾಫೆಟ್, ಬಿ.ಟಿ.ಲಲಿತಾನಾಯಕ್, ಜಿ.ಎಸ್.ಪಾಟೀಲ್ ಸೇರಿ 150 ಕ್ಕೂ ಹೆಚ್ಚು ಮಂದಿ ನಾನಾ ಜಾತಿಗಳ ಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.

ENGLISH SUMMARY..

Socio economic caste survey report to be recieved CM Siddaramaiah

Bengaluru, June 06: Chief Minister Siddaramaiah assured that he would receive the report of the social economic caste survey conducted by the Permanent Backward Classes Commission during the erstwhile Government led by him. Various communities will be given facilities, based on that data.

He spoke to the delegation of Karnataka Shoshitha Vargagala Maha okkuta that met him today at home office Krishna.

The caste-wise survey will provide the necessary data for taking appropriate decisions about the facilities to be provided to the people(preferential treatment).The survey was conducted to avail Scientific and accurate information which is essential for providing reservation and other facilities. He said that the report would be received and appropriate action will be taken based on the data.

The confusion created by BJP government in reservation will be resolved. Otherwise social justice cannot be provided to anyone, the Chief Minister opined .

More than 150 representatives and leaders of different unions belonging to various castes headed by K. M. Ramachandrappa including Mavalli Shankar, Prof. Ravi Vermakumar, Ananth Nayak, Dr. Narasimhaiah, Prof. Japhet, BT Lalithanayak, GS Patil had participated in the meeting.

-V.Mahesh kumar

Key words: Socio economic –caste- survey  -report – recieved -CM Siddaramaiah