ಸೂರ್ಯಗ್ರಹಣ ಹಿನ್ನೆಲೆ: ನಾಳೆ ಮಧ್ಯಾಹ್ನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ.

Promotion

ಮೈಸೂರು,ಅಕ್ಟೋಬರ್,24,2022(www.justkannada.in):  ನಾಳೆ ಸೂರ್ಯಗ್ರಹಣ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಾಳೆ ಮಧ್ಯಾಹ್ನ 1 ಗಂಟೆ ಬಳಿಕ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಈ ಕುರಿತು ಚಾಮುಂಡೇಶ್ವರಿ ದೇವಸ್ಥಾನದ ಮಂಡಳಿ ಪ್ರಕಟಣೆ ಹೊರಡಿಸಿದೆ. ನಾಳೆ ಸೂರ್ಯಗ್ರಹಣದ ಸಂದರ್ಭದಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ.  ಗ್ರಹಣದ ಪೂಜೆ ಹಿನ್ನೆಲೆ ನಾಳೆ ಮಧ್ಯಾಹ್ನ 1 ಗಂಟೆ ಬಳಿಕ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.

Key words: Solar- eclipse –  Chamundi hill -restriction – devotees -tomorrow